ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್'ಗೆ ಟ್ರಕ್ ಡಿಕ್ಕಿ, 13 ಮಂದಿ ದುರ್ಮರಣ

ಆಗ್ರಾ-ಲಖನೌ ಎಕ್ಸ್'ಪ್ರೆಸ್ ವೇನಲ್ಲಿ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತ ಸಂಭವಿಸಿ 13 ಮಂದಿ ದುರ್ಮರಣವನ್ನಪ್ಪಿ, 31ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. 

Published: 13th February 2020 09:26 AM  |   Last Updated: 13th February 2020 09:28 AM   |  A+A-


At least 13 killed, 31 injured as bus rams into truck in UP's Firozabad

ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್'ಗೆ ಟ್ರಂಕ್ ಡಿಕ್ಕಿ, 13 ಮಂದು ದುರ್ಮರಣ

Posted By : Manjula VN
Source : The New Indian Express

ಫಿರೋಜಾಬಾದ್: ಆಗ್ರಾ-ಲಖನೌ ಎಕ್ಸ್'ಪ್ರೆಸ್ ವೇನಲ್ಲಿ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತ ಸಂಭವಿಸಿ 13 ಮಂದಿ ದುರ್ಮರಣವನ್ನಪ್ಪಿ, 31ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. 

ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಫಿರೋಜಾಬಾದ್'ನ ನಗ್ಲಾ ಖಂಗಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಈ ಕುರಿತು ಸೈಫೈ ಆಸ್ಪತ್ರೆಯ ತುರ್ತುುಚಿಕಿತ್ಸಾ ಘಟಕದ ವೈದ್ಯಾಧಿಕಾರಿ ಡಾ.ವಿಶ್ವ ದೀಪಕ್ ಅವರು ಮಾತನಾಡಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. 31 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. 

ಅಪಘಾತಕ್ಕೀಡಾದ ಬಸ್ ಡಬಲ್ ಡೆಕ್ಕರ್ ಖಾಸಗಿ ಬಸ್ ಆಗಿದ್ದು, ಒಟ್ಟು 40-45 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ. 
 

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp