ಮೀಸಲಾತಿ ತೀರ್ಪು ವಿರೋಧಿಸಿ ಇದೇ 23ಕ್ಕೆ ಭಾರತ್ ಬಂದ್ - ಆಜಾದ್ 

ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿರುವ ಇತ್ತಿಚಿನ ತೀರ್ಪಿನ ಬಗ್ಗೆ ಅಸಮಾಧಾನಗೊಂಡ  ದಲಿತ ಸಂಘಟನೆಗಳು  ಇದೆ  23 ರಂದು  ಭಾರತ್ ಬಂದ್ ಗೆ  ಕರೆ ನೀಡಿವೆ
ಚಂದ್ರಶೇಖರ್ ಆಜಾದ್
ಚಂದ್ರಶೇಖರ್ ಆಜಾದ್

ನವದೆಹಲಿ: ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿರುವ ಇತ್ತಿಚಿನ ತೀರ್ಪಿನ ಬಗ್ಗೆ ಅಸಮಾಧಾನಗೊಂಡ  ದಲಿತ ಸಂಘಟನೆಗಳು  ಇದೆ  23 ರಂದು  ಭಾರತ್ ಬಂದ್ ಗೆ  ಕರೆ ನೀಡಿವೆ

ನ್ಯಾಯಾಲಯದ ತೀರ್ಪನ್ನು ವಿರೋಧಿಸಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಭಾರತ್ ಬಂದ್ ಗೆ  ಕರೆ ನೀಡಿದ್ದು  ದಲಿತ ಮತ್ತು ಹಿಂದುಳಿದ ವರ್ಗಗಳ ಎಲ್ಲಾ ಜನಪ್ರತಿನಿಧಿಗಳು ಒಗ್ಗೂಡಿ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಆಗ್ರಹಿಸಿದ್ದಾರೆ

ತೀರ್ಪಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ಕೂಡಲೇ ಸುಗ್ರೀವಾಜ್ಞೆ ಹೊರಡಿಸಬೇಕು.ಮೇಲ್ಮನವಿ ಸಲ್ಲಿಸಬೇಕು  ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಸರ್ವಪಕ್ಷಗಳ ಎಲ್ಲಾ ಸಂಸದರು ಮತ್ತು ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕು  ಎಂದೂ  ಆಜಾದ್ ಒತ್ತಾಯಿಸಿದ್ದಾರೆ .

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com