ಹುರಿಯತ್ ನಾಯಕ ಗಿಲಾನಿ ಆರೋಗ್ಯದ ಕುರಿತು ವದಂತಿ: ಕಾಶ್ಮೀರದಲ್ಲಿ ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ

ಪ್ರತ್ಯೇಕತಾವಾದಿ ನಾಯಕ ಸಯ್ಯದ ಅಲಿ ಶಾ ಗಿಲಾನಿ ಆರೋಗ್ಯದ ಕುರಿತು ವದಂತಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 
ಸಯ್ಯದ ಅಲಿ ಶಾ ಗಿಲಾನಿ
ಸಯ್ಯದ ಅಲಿ ಶಾ ಗಿಲಾನಿ

ಶ್ರೀನಗರ: ಪ್ರತ್ಯೇಕತಾವಾದಿ ನಾಯಕ ಸಯ್ಯದ ಅಲಿ ಶಾ ಗಿಲಾನಿ ಆರೋಗ್ಯದ ಕುರಿತು ವದಂತಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 

ಈ ಹಿಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಂಡ ಬಳಿಕ ಇಂಟರ್ನೆಟ್ ಸೇವೆಗಳನ್ನು ರದ್ದುಪಡಿಲಾಗಿತ್ತು. 

ಇದೀಗ ಗೃಹ ಬಂಧನದಲ್ಲಿರುವ ಗಿಲಾನಿ ಆರೋಗ್ಯದ ಕುರಿತು ಸಾಮಾಜಿದ ಜಾಲತಾಣಗಳಲ್ಲಿ ಕೆಲ ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

ವದಂತಿ ಹಿನ್ನೆಲೆಯಲ್ಲಿ ಜಮು ಮತ್ತು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ವದಂತಿ ಕುರಿತಂತೆ ಸ್ವತಃ ಗಿಲಾನಿ ಕುಟುಂಬ ಹೇಳಿಕೆ ನೀಡಿದ್ದು, ಗಿಲಾನಿಯವರು ಕೆಲಕಾಲವಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com