ಎಲ್ ಇಟಿ, ಜೆಇಎಂ ಉಗ್ರರ ಬಗ್ಗೆ ರಾಹುಲ್ ಗೆ ಸಹಾನುಭೂತಿ- ಬಿಜೆಪಿ

ಕಳೆದ ವರ್ಷ ಇದೇ ದಿನ ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಪೈಶಾಚಿಕ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್ ಪಿಎಫ್ ಯೋಧರನ್ನು ಇಡೀ ದೇಶವೇ ಸ್ಮರಿಸುತ್ತಿದ್ದರೆ ಮತ್ತೊಂದೆಡೆ ಇದೇ ವಿಚಾರವಾಗಿ  ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ  ಕಾಂಗ್ರೆಸ್ ನಡುವಣ ವಾಕ್ಸಮರ ನಡೆದಿದೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕಳೆದ ವರ್ಷ ಇದೇ ದಿನ ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಪೈಶಾಚಿಕ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್ ಪಿಎಫ್ ಯೋಧರನ್ನು ಇಡೀ ದೇಶವೇ ಸ್ಮರಿಸುತ್ತಿದ್ದರೆ ಮತ್ತೊಂದೆಡೆ ಇದೇ ವಿಚಾರವಾಗಿ  ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ  ಕಾಂಗ್ರೆಸ್ ನಡುವಣ ವಾಕ್ಸಮರ ನಡೆದಿದೆ. 

ಪುಲ್ವಾಮಾ ದಾಳಿಯಿಂದ ಯಾರಿಗೆ ಪ್ರಯೋಜವಾಗಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿರುವಂತೆ ಅವರು, ಎಲ್ ಇಟಿ ಮತ್ತು ಜೆಇಎಂ ಉಗ್ರರ ಪರ ಸಹಾನೂಭೂತಿವುಳ್ಳವರಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಈ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಸಿಪಿಐ ಪ್ರಶ್ನೆಯನ್ನು ಎತ್ತಿದ್ದರೆ, ಕಳೆದ ವರ್ಷ ಇದೇ ದಿನದಿಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದ್ದ ಉಗ್ರರ ಪೈಶಾಚಿಕ ದಾಳಿ ವೇಳೆಯಲ್ಲಿ  ಹುತಾತ್ಮರಾದ 40 ಮಂದಿ ಸಿಆರ್ ಪಿಎಫ್ ಸಿಬ್ಬಂದಿಯನ್ನು ಗಾಂಧಿ ಅವಮಾನಿಸಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆದಿದೆ.

ಹುತಾತ್ಮ ಸಿಆರ್ ಪಿಎಫ್ ಯೋಧರನ್ನು ಸ್ಮರಿಸಿರುವ ರಾಹುಲ್ ಗಾಂಧಿ, ಈ ದಾಳಿಯಿಂದ ಯಾರಿಗೆ ಪ್ರಯೋಜನವಾಯಿತು ಎಂಬುದರ ಬಗ್ಗೆ ತನಿಖೆ ನಡೆಯಬೇಕಾಗಿದೆ ಎಂದು ಹೇಳಿದ್ದಾರೆ. 

ಇಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುತ್ತಿದ್ದೇವೆ. ಈ ದಾಳಿಯಿಂದ ಯಾರಿಗೆ ಹೆಚ್ಚು ಪ್ರಯೋಜನವಾಯಿತು ಎಂದು ಪ್ರಶ್ನಿಸುತ್ತೇನೆ.  ಈ ದಾಳಿಯಿಂದ ಆದಂತಹ ಲಾಭದ ಬಗ್ಗೆ ತನಿಖೆ ನಡೆಯಬೇಕೆಂದು ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಟ್ವೀಟ್ ಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದವರಿಗೆ ದೇಶವೇ ಸ್ಮರಿಸುತ್ತಿರುವಾಗ ರಾಹುಲ್ ಗಾಂಧಿ, ಎಲ್ ಇಟಿ, ಜೈಷ್ -ಇ- ಮೊಹಮ್ಮದ್ ಪರ ಸಹಾನೂಭೂತಿ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ನೈಜ ದುಷ್ಕರ್ಮಿಗಳ ಬಗ್ಗೆ ರಾಹುಲ್ ಗಾಂಧಿ ಪ್ರಶ್ನಿಸುವುದಿಲ್ಲ ಎಂದು ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಇಂತಹ ಹೇಳಿಕೆ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ವಿರುದ್ಧ ಕೌಂಟರ್ ನೀಡಲು ಪಾಕಿಸ್ತಾನಕ್ಕೆ ಸಹಕಾರಿಯಾಗಲಿದೆ ಎಂದು ಶಹನವಾಜ್ ಹುಸೇನ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com