ನಿರ್ಭಯಾ ಪ್ರಕರಣ: ಅಪರಾಧಿ ವಿನಯ್ ಶರ್ಮಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ನಿರ್ಭಯಾ ಅತ್ಯಾಚಾರಿ ವಿನಯ್ ಶರ್ಮಾಗೆ ಹಿನ್ನಡೆಯಾಗಿದ್ದು, ಆತ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡ ವಜಾಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ನಿರ್ಭಯಾ ಅತ್ಯಾಚಾರಿ ವಿನಯ್ ಶರ್ಮಾಗೆ ಹಿನ್ನಡೆಯಾಗಿದ್ದು, ಆತ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡ ವಜಾಗೊಳಿಸಿದೆ.

ಈ ಹಿಂದೆ ಅಪರಾಧಿ ವಿನಯ್ ಶರ್ಮಾ, 'ನಿರ್ಭಯಾ ಪ್ರಕರಣದಲ್ಲಿ ರಾಷ್ಟ್ರಪತಿಗಳು ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ವಿನಯ್ ಶರ್ಮಾಅರ್ಜಿ ಸಲ್ಲಿಕೆ ಮಾಡಿದ್ದ. ಅರ್ಜಿಯಲ್ಲಿ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಬೇಕು. ಜೈಲಿನಲ್ಲಿ ಹಿಂಸೆಯಿಂದಾಗಿ ಮಾನಸಿಕ ಆರೋಗ್ಯ ಹದಗೆಟ್ಟಿದೆ. ನನ್ನನ್ನು ಗಲ್ಲಿಗೇರಿಸುವುದನ್ನು ಬೆಂಬಲಿಸಿ ಕೇಂದ್ರ ಸರ್ಕಾರದ ಸಚಿವರು ಹಾಗೂ ದೆಹಲಿ ಸರ್ಕಾರ ಸಾರ್ವಜನಿಕವಾಗಿ ನೀಡಿದ್ದ ಹೇಳಿಕೆಗಳಿಂದಾಗಿ, ನನ್ನ ಕ್ಷಮಾದಾನ ಅರ್ಜಿಯ ನಿರ್ಣಯ ಪೂರ್ವನಿರ್ಧರಿತವಾಗಿತ್ತು. ಕ್ಷಮಾದಾನ ಅರ್ಜಿ ಸಲ್ಲಿಕೆಯಾದ 48 ತಾಸುಗಳಲ್ಲಿಯೇ ತರಾತುರಿಯಲ್ಲಿ ಅರ್ಜಿಯನ್ನು ತಿರಸ್ಕರಿಸಿರುವುದು ವಂಚನೆ. ಇದು ಸಂವಿಧಾನದ ಉಲ್ಲಂಘನೆ ಎಂದು ಆರೋಪಿಸಿದ್ದ. 

ಅಲ್ಲದೆ 'ಜೈಲಿನಲ್ಲಿ ಅಕ್ರಮವಾಗಿ ಆತನನ್ನು ಪ್ರತ್ಯೇಕ ಇರಿಸುವ ಮೂಲಕ ಅಧಿಕಾರಿಗಳು ಕಾನೂನನ್ನು ಉಲ್ಲಂಘಿಸಿದ್ದಾರೆ. ಇದರಿಂದ ಶರ್ಮಾನ ಹಕ್ಕುಗಳ ಉಲ್ಲಂಘನೆಯಾಗಿದೆ. ಹಿಂಸೆಯಿಂದಾಗಿ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಆತ ಜೈಲಿನಲ್ಲಿ ಮನೋವೈದ್ಯಕೀಯ ಚಿಕಿತ್ಸೆ ಪಡೆದುಕೊಂಡಿದ್ದಾನೆ. ಜೈಲಿನಲ್ಲಿ ಮಾನಸಿಕ ಅಸ್ವಸ್ಥರಾಗಿದ್ದರೆ, ಗಲ್ಲುಶಿಕ್ಷೆಯನ್ನು ಬದಲಿಸಲು ಕೋರಲು ಅದು ಸಹ ಒಂದು ಆಧಾರವಾಗುತ್ತದೆ' ಎಂದು ಆತನ ಪರ ವಕೀಲ ಎ.ಪಿ. ಸಿಂಗ್ ಅವರು ಅರ್ಜಿಯಲ್ಲಿ ಹೇಳಿದ್ದಾರೆ.

ಅಂತೆಯೇ ಸುಪ್ರೀಂ ಕೋರ್ಟ್ ಕೂಡ ಅರ್ಜಿಯ ವಿಚಾರಣೆಯನ್ನು ಇಂದಿಗೆ ಮುಂದೂಡಿ ಕುತೂಹಲ ಕೆರಳಿಸಿತ್ತು.

ಆದರೆ ಇದೀಗ ಈ ಕುತೂಹಲಗಳಿಗೆಲ್ಲಾ ತೆರೆ ಬಿದಿದ್ದು, ಅಪರಾಧಿ ವಿನಯ್ ಶರ್ಮಾ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರ ನೇತೃತ್ವ್ದ ತ್ರಿಸದಸ್ಯ ಪೀಠ, ರಾಷ್ಟ್ರಪತಿಗಳು ವಿವೇಚನೆಯಿಂದಲೇ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅರ್ಜಿ ವಿಚಾರಣೆ ವೇಳೆ ರಾಷ್ಟ್ರಪತಿಗಳಿಗೆ ವಿನಯ್ ಶರ್ಮಾನ ವೈದ್ಯಕೀಯ ವರದಿ, ಜೈಲು ಅಧಿಕಾರಿಗಳ ವರದಿಗಳನ್ನು ಲಗತ್ತಿಸಲಾಗಿತ್ತು. ಇವೆಲ್ಲವುಗಳ ಪರಿಶೀಲನೆ ಬಳಿಕವೇ ಅರ್ಜಿ ವಜಾಗೊಳಿಸಲಾಗಿದೆ. ಹೀಗಾಗಿ ವಿನಯ್ ಶರ್ಮಾ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಆತನ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಯಾವುದೇ ಅಂಶಗಳೂ ಕಂಡು ಬರುತ್ತಿಲ್ಲ ಎಂದು ಪೀಠ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com