ದೆಹಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್‌ರನ್ನು ನೇಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್!

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಧಿಕೃತವಾಗಿ ನೇಮಕ ಮಾಡಿದ್ದು 6ನೇ ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಮನಾಥ್-ಕೋವಿಂದ್-ಕೇಜ್ರಿವಾಲ್
ರಾಮನಾಥ್-ಕೋವಿಂದ್-ಕೇಜ್ರಿವಾಲ್

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಧಿಕೃತವಾಗಿ ನೇಮಕ ಮಾಡಿದ್ದು 6ನೇ ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಮುಖ್ಯಮಂತ್ರಿಗಳ ಸಲಹಾ ಮೇರೆಗೆ ಇತರೆ ಆರು ಶಾಸಕರನ್ನು ದೆಹಲಿ ಸರ್ಕಾರದ ಸಚಿವರನ್ನಾಗಿ ರಾಷ್ಟ್ರಪತಿಗಳು ಇದೇ ವೇಳೆ ನೇಮಕ ಮಾಡಿದ್ದಾರೆ. ಫೆಬ್ರವರಿ 16ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಅವರನ್ನು ನೇಮಕ ಮಾಡಲು ಸಂತಸವಾಗಿದೆ. ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಸಿಎಂ ಆಗಿ ಕಾರ್ಯಾರಂಭ ಮಾಡಲಿದ್ದಾರೆ ಎಂದು ರಾಷ್ಟ್ರಪತಿಗಳ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

70 ಕ್ಷೇತ್ರಗಳ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಆಪ್ 62 ಸ್ಥಾನಗಳಲ್ಲಿ ಗೆದ್ದು ಪ್ರಚಂಡ ಗೆಲುವು ಸಾಧಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com