ಪುಲ್ವಾಮ ದಾಳಿಯಿಂದ ಹೆಚ್ಚು ಲಾಭ ಮಾಡಿಕೊಂಡಿದ್ದು ಯಾರು?: ಬಿಜೆಪಿಗೆ ರಾಹುಲ್ ಗಾಂಧಿ ಪ್ರಶ್ನೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ದಾಳಿಯಲ್ಲಿ ಉಗ್ರರು ನಡೆಸಿದ್ದ ಭೀಕರ ದಾಳಿಯಲ್ಲಿ 40 ಮಂದಿ ವೀರ ಯೋಧರು ಹುತಾತ್ಮರಾಗಿದ್ದರು. ಈ ದುರ್ಘಟನೆ ನಡೆದು ಇಂದಿಗೆ 1 ವರ್ಷ ಕಳೆದಿದ್ದು ದಾಳಿ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿಗೆ 3 ಪ್ರಶ್ನೆಗಳನ್ನು ಕೇಳಿದ್ದಾರೆ. 
ರಾಹುಲ್
ರಾಹುಲ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ದಾಳಿಯಲ್ಲಿ ಉಗ್ರರು ನಡೆಸಿದ್ದ ಭೀಕರ ದಾಳಿಯಲ್ಲಿ 40 ಮಂದಿ ವೀರ ಯೋಧರು ಹುತಾತ್ಮರಾಗಿದ್ದರು. ಈ ದುರ್ಘಟನೆ ನಡೆದು ಇಂದಿಗೆ 1 ವರ್ಷ ಕಳೆದಿದ್ದು ದಾಳಿ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿಗೆ 3 ಪ್ರಶ್ನೆಗಳನ್ನು ಕೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಪುಲ್ವಾಮ ಉಗ್ರರ ದಾಳಿ ಘಟನೆಯಿಂದ ಯಾರಿಗೆ ಹೆಚ್ಚು ಲಾಭವಾಯಿತು? ಎಂದು ಪ್ರಶ್ನಿಸಿದ್ದಾರೆ. 

ಅಲ್ಲದೆ. ಘಟನೆಯನ್ನು ತನಿಖೆಗೆ ಒಳಪಡಿಸಲಾಗಿತ್ತು. ಆ ತನಿಖೆಯ ಕಥೆ ಏನಾಯಿತು ಎಂದು ಕೇಳಿದ್ದಾರೆ. ದಾಳಿಕೆ ಕಾರಣವಾದ ಭದ್ರತಾ ಲೋಪವಾಗಲು ಬಿಜೆಪಿ ಸರ್ಕಾರದಲ್ಲಿ ಯಾರು ಹೊಣೆ ಎಂದೂ ಕೂಡ ಪ್ರಶ್ನಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com