ವುಹಾನ್ ಕಾರ್ಯಾಚರಣೆ: ಏರ್ ಇಂಡಿಯಾ, ಆರೋಗ್ಯ ಸಚಿವಾಲಯಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ಕೊರೊನಾ ವೈರಾಣು ಸೋಂಕು ವ್ಯಾಪಕವಾಗಿ ಕಾಣಿಸಿಕೊಂಡಿದ್ದ ಚೀನಾ ದೇಶ ವುಹಾನ್ ನಲ್ಲಿನ ಭಾರತೀಯರನ್ನು ಅಲ್ಲಿನ ವಾಪಸ್ ಕರೆತರುವಲ್ಲಿ ಶ್ರಮಿಸಿದ ಏರ್ ಇಂಡಿಯಾ ಮತ್ತು ಆರೋಗ್ಯ ಸಚಿವಾಲಯದ ಅಧಿಕಾರಿಗಳ ಪ್ರಯತ್ನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತೀಯರ ರಕ್ಷಣೆ
ಭಾರತೀಯರ ರಕ್ಷಣೆ

ನವದೆಹಲಿ: ಕೊರೊನಾ ವೈರಾಣು ಸೋಂಕು ವ್ಯಾಪಕವಾಗಿ ಕಾಣಿಸಿಕೊಂಡಿದ್ದ ಚೀನಾ ದೇಶ ವುಹಾನ್ ನಲ್ಲಿನ ಭಾರತೀಯರನ್ನು ಅಲ್ಲಿನ ವಾಪಸ್ ಕರೆತರುವಲ್ಲಿ ಶ್ರಮಿಸಿದ ಏರ್ ಇಂಡಿಯಾ ಮತ್ತು ಆರೋಗ್ಯ ಸಚಿವಾಲಯದ ಅಧಿಕಾರಿಗಳ ಪ್ರಯತ್ನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ತಂಡಕ್ಕೆ ಪ್ರಧಾನಿ ಮೋದಿ ಮೆಚ್ಚುಗೆಯ ಪತ್ರ ಬರೆದಿದ್ದು ಈ ಪತ್ರವನ್ನು ನಾಗರಿಕ ವಿಮಾನಯಾನ ಸಚಿವರು ಸಿಬ್ಬಂದಿಗೆ ನೀಡಲಿದ್ದಾರೆ.

ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ವ್ಯಾಪಕವಾಗಿ ಹರಡಿರುವ ವುಹಾನ್ ನಲ್ಲಿನ ಭಾರತೀಯರನ್ನು ರಕ್ಷಿಸಲು ಏರ್ ಇಂಡಿಯಾ ತುರ್ತು ಕಾರ್ಯಾಚರಣೆ ನಡೆಸಿತ್ತು. ಈ ಪ್ರದೇಶದಲ್ಲಿನ ಗಂಭೀರ ಸ್ಥಿತಿಯ ಬಗ್ಗೆ ಅರಿವಿದ್ದರೂ ಅಲ್ಲಿನ ಭಾರತೀಯರ ರಕ್ಷಣೆಗಾಗಿ ಸತತ ಎರಡು ದಿನ ಅಂದರೆ 2020ರ ಜನವರಿ 31 ಮತ್ತು ಫೆಬ್ರವರಿ 1ರಂದು ಏರ್ ಇಂಡಿಯಾ ಮತ್ತು ಆರೋಗ್ಯ ಸಚಿವಾಲಯದ ತಂಡವನ್ನು ಎರಡು ಬಿ–747 ವಿಮಾನದಲ್ಲಿ ಕಳುಹಿಸಿಕೊಟ್ಟಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com