ಪುಲ್ವಾಮ ದಾಳಿಯ ವೀರ ಯೋಧರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ: ಗೃಹ ಸಚಿವ ರಾಜನಾಥ್ ಸಿಂಗ್

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ತ್ಯಾಗ, ಬಲಿದಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 
ಗೃಹ ಸಚಿವ ರಾಜನಾಥ್ ಸಿಂಗ್
ಗೃಹ ಸಚಿವ ರಾಜನಾಥ್ ಸಿಂಗ್

40 ಯೋಧರ ಬಲಿ ಪಡೆದಿದ್ದ ಪುಲ್ವಾಮ ದಾಳಿಗೆ ಇಂದಿಗೆ ವರ್ಷ: ವೀರ ಯೋಧರಿಗೆ ನಮನ ಸಲ್ಲಿಸಿದ ರಾಜನಾಥ್, ಅಮಿತ್ ಶಾ


ನವದೆಹಲಿ: ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ತ್ಯಾಗ, ಬಲಿದಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿರುವ ರಾಜನಾಥ್ ಸಿಂಗ್ ಅವರು, 2019ರ ಫೆ.14 ರಂದು ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್'ಪಿಎಫ್ ವೀರ ಯೋಧರನ್ನು ನೆನೆಯುತ್ತಿದ್ದೇವೆ. ವೀರ ಯೋಧರ ತ್ಯಾಗ, ಬಲಿದಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಭಯೋತ್ಪಾದನೆ ವಿರುದ್ಧ ಇಡೀ ದೇಶ ಒಗ್ಗೂಡಿಸಿದೆ. ಭಯೋತ್ಪಾದನೆ ಎಂಬ ಪಿಡುಗಿನ ವಿರುದ್ಧ ಪ್ರತೀಯೊಬ್ಬರೂ ಹೋರಾಟ ಮಾಡಲು ಬದ್ಧರಾಗಿದ್ದಾರೆಂದು ಹೇಳಿದ್ದಾರೆ. 

ಇದರಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ, ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುತ್ತೇನೆ. ವೀರ ಯೋಧರ ಬಲಿದಾನ, ಅವರ ಕುಟುಂಬದ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ. 

ಕಳೆದ ವರ್ಷ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸುತ್ತೇನೆ. ನಮ್ಮ ರಾಷ್ಟ್ರದ ಸೇವೆ ಮತ್ತು ರಕ್ಷಣೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳಿವರು. ವೀರ ಯೋಧರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com