ಟೆಲಿಕಾಂ ಕಂಪನಿಗಳು ದಿವಾಳಿಯಾದರೆ ಬ್ಯಾಂಕ್ ಗಳೇ ಬೆಲೆ ತೆರಬೇಕಾಗುತ್ತದೆ: ಎಸ್ ಬಿಐ ಅಧ್ಯಕ್ಷ

ದೇಶದ ಟೆಲಿಕಾಂ ಕಂಪನಿಗಳು ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಿದ ಒಟ್ಟು ವರಮಾನ(ಎಜಿಆರ್‌) ₹1.47 ಲಕ್ಷ ಕೋಟಿ ರೂ. ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ ಬೆನ್ನಲ್ಲೇ, ಯಾವುದೇ ಟೆಲಿಕಾಂ ಕಂಪನಿ ತಾನು ದಿವಾಳಿಯಾಗಿರುವುದಾಗಿ ಘೋಷಿಸಿಕೊಂಡರೆ ಅದಕ್ಕೆ ಬ್ಯಾಂಕ್ ಗಳೇ ಬೆಲೆ ತೆರಬೇಕಾಗುತ್ತದೆ ಎಂದು ಎಸ್ ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು ಶನಿವಾರ ಎಚ್ಚರಿಸ
ರಜನೀಶ್ ಕುಮಾರ್
ರಜನೀಶ್ ಕುಮಾರ್

ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಿದ ಒಟ್ಟು ವರಮಾನ(ಎಜಿಆರ್‌) ₹1.47 ಲಕ್ಷ ಕೋಟಿ ರೂ. ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ ಬೆನ್ನಲ್ಲೇ, ಯಾವುದೇ ಟೆಲಿಕಾಂ ಕಂಪನಿ ತಾನು ದಿವಾಳಿಯಾಗಿರುವುದಾಗಿ ಘೋಷಿಸಿಕೊಂಡರೆ ಅದಕ್ಕೆ ಬ್ಯಾಂಕ್ ಗಳೇ ಬೆಲೆ ತೆರಬೇಕಾಗುತ್ತದೆ ಎಂದು ಎಸ್ ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು ಶನಿವಾರ ಎಚ್ಚರಿಸಿದ್ದಾರೆ.

ನಾವು ಕಾದು ನೋಡುತ್ತೇವೆ ಎಂದಿರುವ ದೇಶದ ಮುಂಚೂಣಿ ಸಾರ್ವಜನಿಕ ವಲಯದ ಬ್ಯಾಂಕ್ ಮುಖ್ಯಸ್ಥ, 
ಟೆಲಿಕಾಂ ಕಂಪೆನಿಗಳು, ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುತ್ತವೆಯೇ ಎಂಬುದನ್ನು ಖಾತರಿಪಡಿಕೊಳ್ಳುವುದು ಸರ್ಕಾರದ ಅಡಿಯಲ್ಲಿರುವ ದೂರಸಂಪರ್ಕ ಇಲಾಖೆಗೆ(ಡಿಒಟಿ) ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

'ಒಂದು ವೇಳೆ ಸುಪ್ರೀಂ ಆದೇಶ ಯಾವುದೇ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದರೆ, ಅದರ ಪರಿಣಾಮ ಇಡೀ ವ್ಯವಸ್ಥೆಯ ಮೇಲೆ ಬೀರುತ್ತದೆ. ಅದು ಬ್ಯಾಂಕ್ ಆಗಿರಬಹುದು, ಅದರ ಉದ್ಯೋಗಿಗಳಾಗಿರಬಹುದು, ಮಾರಾಟಗಾರರು, ಗ್ರಾಹಕರು ಸೇರಿದಂತೆ ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುತ್ತದೆ. ನಾವು ಸಹ ಅದಕ್ಕೆ ಬೆಲೆ ತೆರಬೇಕಾಗುತ್ತದೆ' ಎಂದು ರಜನೀಶ್ ಕುಮಾರ್ ಹೇಳಿದ್ದಾರೆ.

ಯಾವುದೇ ಕಂಪನಿ ಬಂದ್ ಆದರೂ ಅದು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಯಾವುದೇ ಕಂಪನಿ ಮುಚ್ಚದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಟೆಲಿಕಾಂ ಕಂಪನಿಗಳು ಬಾಕಿ ಉಳಿಸಿ ಕೊಂಡಿರುವ ಹೊಂದಾಣಿಕೆ ಮಾಡಿದ ಒಟ್ಟು ವರಮಾನ(ಎಜಿಆರ್‌)ದ ಹಣ ಪಾವತಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ, ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ಸುಪ್ರೀಂ ಕೋರ್ಟ್ ಆದೇಶವನ್ನೇ ತಡೆ ಹಿಡಿದಿದ್ದ ಕೇಂದ್ರ ಟೆಲಿಕಮ್ಯುನಿಕೇಷನ್ ಇಲಾಖೆಯನ್ನು ಸರ್ವೋಚ್ಛ ನ್ಯಾಯಾಲಯ ನಿನ್ನೆ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಎಚ್ಚೆತ್ತುಕೊಂಡ ಡಿಒಟಿ, ಕೂಡಲೇ ಬಾಕಿ ಪಾವತಿಸುವಂತೆ ಭಾರತಿ ಏರ್ಟೆಲ್ ಹಾಗೂ ವೊಡಾಫೋನ್ ಗೆ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com