ಮಾನನಷ್ಟ ಪ್ರಕರಣ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಗೆ ಕೋರ್ಟ್ ಸಮನ್ಸ್ ಜಾರಿ

ಕಾಂಗ್ರೆಸ್ ಸಂಸದ ಶಶಿತರೂರ್ ಅವರು ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ತಿರುವನಂತಪುರಂ ನ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಖುದ್ಧು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಿರುವನಂತಪುರ: ಕಾಂಗ್ರೆಸ್ ಸಂಸದ ಶಶಿತರೂರ್ ಅವರು ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ತಿರುವನಂತಪುರಂ ನ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಖುದ್ಧು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಶಶಿತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ರವಿಶಂಕರ್ ಪ್ರಸಾದ್ ಅವಹೇಳನಕಾರಿ ಹೇಳಿಕೆ ಮತ್ತು ಚಾರಿತ್ರ್ಯವಧೆಯಾಗುವಂತಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದ ಶಶಿತರೂರ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ರವಿಶಂಕರ್ ಪ್ರಸಾದ್ ವಿರುದ್ಧ ಐಪಿಸಿ ಸೆಕ್ಷನ್ 308, 498ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 

ಇದೀಗ ತಿರುವನಂತಪುರಂ ನ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮೇ 2ರಂದು ನಡೆಯಲಿರುವ ವಿಚಾರಣೆಗೆ ಖುದ್ಧ ಹಾಜರಾಗುವಂತೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com