ಸಿಎಎ ಹಿಂಸಾಚಾರ: ಪರಿಹಾರ ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಜಾಮಿಯಾ ವಿದ್ಯಾರ್ಥಿಗಳು

ಸಿಎಎ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡುವಂತೆ ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹಿಂಸಾಚಾರ (ಸಂಗ್ರಹ ಚಿತ್ರ)
ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹಿಂಸಾಚಾರ (ಸಂಗ್ರಹ ಚಿತ್ರ)

ನವದೆಹಲಿ: ಸಿಎಎ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡುವಂತೆ ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಪೌರತ್ವ ತಿದ್ದುಪಡಿ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿರುವ ತಮಗೆ ಪರಿಹಾರ ನೀಡಬೇಕು ಎಂದು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಸಿ.ಹರಿ ಶಂಕರ್ ಅವರ ನೇತೃತ್ವದ ಪೀಠ ಈ ಆದೇಶ ನೀಡಿದ್ದು, ಕೇಂದ್ರ ಸರ್ಕಾರ ಮತ್ತು ರಾಜ್ಯದ ಆಪ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಇದಕ್ಕೂ ಮೊದಲು ವಿದ್ಯಾರ್ಥಿಗಳ ಪರ ವಾದ ಮಂಡಿಸಿದ್ದ ವಕೀಲರಾದ ನಬಿಲಾ ಹಸನ್ ಅವರು, ತಮ್ಮ ಕಕ್ಷೀದಾರ ಹಾಗು ಅಂದು ಹಲ್ಲೆಗೊಳಗಾಗಿದ್ದ ವಿವಿಯ ವಿದ್ಯಾರ್ಥಿ ಶಯಾನ್ ಮುಜೀಬ್ ತಮಗಾದ ಗಾಯಗಳಿ ಚಿಕಿತ್ಸೆಗಾಗಿ ಈ ವರೆಗೂ ಸುಮಾರು 2ಲಕ್ಷ ರೂಗಿಂತ ಅಧಿಕ ಹಣ ವ್ಯಯಿಸಿದ್ದಾರೆ ಎಂದು ಹೇಳಿದ್ದರು.

ಜಾಮಿಯಾ ಬಳಿ ಕಳೆದ ವರ್ಷ ಡಿಸೆಂಬರ್ 15 ರಂದು ನಡೆದ ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದು ಪ್ರತಿಭಟನೆ ಹಿಂಸೆಗೆ ತಿರುಗಿತ್ತು. ಸಾರ್ವಜನಿಕ ಬಸ್ಸುಗಳು ಮತ್ತು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ನಂತರ ಪೊಲೀಸ್ ಸಿಬ್ಬಂದಿ ಜಾಮಿಯಾ ಪ್ರವೇಶಿಸಿ, ಅಶ್ರುವಾಯು ಸಿಡಿಸಿದ್ದರು. ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಇದರಿಂದ ಹಲವು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com