ಉಪ ಚುನಾವಣೆಯಿಂದ ದೂರ ಉಳಿಯಲು ಪಿಡಿಪಿ- ಕಾಂಗ್ರೆಸ್ ನಿರ್ಧಾರ: ಬುಖಾರಿಯಿಂದ ಹೊಸ ಪಕ್ಷ!

ಜಮ್ಮು- ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು- ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಪಿಡಿಪಿ ಪಕ್ಷಗಳು ಜಮ್ಮು ಕಾಶ್ಮೀರದಲ್ಲಿ ನಡೆಯುವ ಪಂಚಾಯತ್ ಚುನಾವಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದೆ.

8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಉಪ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಧರಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಮುಖಂಡ ಗುಲಾಮ್ ಅಹ್ಮದ್ ಮಿರ್ ಹೇಳಿದ್ದಾರೆ.

ಮಾಜಿ ಮಂತ್ರಿಗಳು, ಮಾಜಿ ಶಾಸಕರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಜಿಲ್ಲಾಧ್ಯಕ್ಷರಿಗೆ ರಾಜ್ಯ ಪ್ರವಾಸಕ್ಕೆ ಅನುಮತಿ ನೀಡಲು  ನಿರಾಕರಿಸಲಾಗಿದೆ,  ಅವರಿಗೆ ಯಾವುದೇ ರಾಜಕೀಯ ಮಾಡಲು ಸಮ್ಮತಿಸಿಲ್ಲ , ಬಿಜೆಪಿ ವಿರುದ್ಧ ಸ್ಪರ್ಧಿಸುವವರಿಗೆ ಮಾತ್ರ ಪಕ್ಷ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.

ಮಾರ್ಚ್ 5 ರಿಂದ 8 ಹಂತಗಳ ಚುನಾವಣೆ ಆರಂಭವಾಗಲಿದೆ. ಮಾಜಿ ಹಣಕಾಸು ಮಂತ್ರಿ ಹಾಗೂ ಹಿರಿಯ ನಾಯಕ ಅಲ್ತಾಪ್ ಬುಖಾರಿ ಇದೇ ತಿಂಗಳ ಕೊನೆಯಲ್ಲಿ ಹೊಸ ಪಕ್ಷ ಸ್ಫಾಪನೆ   ಮಾಡುವುದಾಗಿ ಘೋಷಿಸಿದ್ದಾರೆ.

ಮಾರ್ಚ್ 5,7,9,12,14,16,18 ಹಾಗೂ 20ರಂದು ಪಂಚಾಯತ್ ಚುನಾವಣೆ ನಡೆಯಲಿದೆ. ಫೆಬ್ರುವರಿ 15ರಂದು ಮೊದಲ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದೆ.

ಕಳೆದ ವರ್ಷ ಆಗಸ್ಟ್ ನಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ಪ್ರಮುಖ ರಾಜಕೀಯ ಚುನಾವಣೆ ಇದಾಗಿದೆ. ಲಡಾಖ್ ಕೂಡಾ ಕೇಂದ್ರಾಡಳಿತ ಪ್ರದೇಶವಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com