ಭೀಮಾ ಕೋರೆಗಾಂವ್ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸಲ್ಲ: ಉದ್ಧವ್ ಠಾಕ್ರೆ

ಭೀಮಾ ಕೊರೆಗಾಂವ್ಹಿಂಸಾಚಾರ ಪ್ರಕರಣದ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಭೀಮಾ ಕೊರೆಗಾಂವ್ಹಿಂಸಾಚಾರ ಪ್ರಕರಣದ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಡಿಸೆಂಬರ್ 31, 2017 ರಂದು ಪುಣೆಯ ಶನಿವಾರವಾಡದಲ್ಲಿ ಎಲ್ಗರ್ ಪರಿಷತ್ ಸಮಾವೇಶದಲ್ಲಿ ನಡೆಸಿದ ಪ್ರಚೋದನಾಕಾರಿ ಭಾಷಣದ ಪರಿಣಾಮವಾಗಿ ಈ ಹಿಂಸಾಚಾರ ನಡೆದಿತ್ತು.

ಎಲ್ಗರ್ ಪರಿಷತ್ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸುವುದನ್ನು ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಒಪ್ಪಿಕೊಂಡಿತ್ತು.

"ಎಲ್ಗರ್ ಮತ್ತು ಭೀಮಾ ಕೋರೆಗಾಂವ್ಎರಡು ಪ್ರತ್ಯೇಕ ವಿಷಯಗಳು. ನನ್ನ ದಲಿತ ಸಹೋದರರು ಎದುರಿಸುತ್ತಿರುವ ಸಮಸ್ಯೆ ಭೀಮಾ ಕೋರೆಗಾಂವ್ ಆಗಿದ್ದು ಇದರ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರ ಂಆಡುವುದಿಲ್ಲ. ದಲಿತ ಸಹೋದರರಿಗೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ" ಎಂದು ಠಾಕ್ರೆ ಟ್ವೀಟ್ ಮಾಡಿದ್ದಾರೆ.

ಎಲ್ಗರ್ ಪರಿಷತ್ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸುವ ಠಾಕ್ರೆ ನಿರ್ಧಾರದ ಬಗ್ಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಇತ್ತೀಚೆಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com