ಭದ್ರತಾ ಕಾರಣ: ಜಮ್ಮು-ಕಾಶ್ಮೀರದ ಪಂಚಾಯತ್ ಉಪಚುನಾವಣೆ ಮುಂದೂಡಿಕೆ

ಜಮ್ಮು ಕಾಶ್ಮೀರದಲ್ಲಿ ಮಾರ್ಚ್​​ 5ರಿಂದ ಪಂಚಾಯತ್​ಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ಭದ್ರತಾ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಮ್ಮು ಕಾಶ್ಮೀರದ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಮಾರ್ಚ್​​ 5ರಿಂದ ಪಂಚಾಯತ್​ಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ಭದ್ರತಾ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಮ್ಮು ಕಾಶ್ಮೀರದ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

ಮಾರ್ಚ್​​ 5ರಿಂದ 12,500ಕ್ಕೂ ಹೆಚ್ಚು ಪಂಚಾಯತ್​ ಸ್ಥಾನಗಳಿಗೆ 8 ಹಂತಗಳಲ್ಲಿ ಉಪಚುನಾವಣೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಗೃಹ ಇಲಾಖೆಯು ಭದ್ರತೆಗೆ ಸಂಬಂಧಿಸಿದ ಮಾಹಿತಿ ರವಾನಿಸಿದ ಬಳಿಕ, ಪಂಚಾಯತ್ ಉಪಚುನಾವಣೆಯನ್ನು ಮೂರು ವಾರ ಮುಂದೂಡಲಾಗಿದೆ ಎಂದು ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪಂಚಾಯತ್ ಉಪಚುನಾವಣೆಯನ್ನು ಮಾರ್ಚ್​​ 5ರಿಂದ 20ರವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಮಾರ್ಚ್​​​ 5, ಮಾರ್ಚ್​ 7, ಮಾರ್ಚ್​ 9, ಮಾರ್ಚ್​ 12, ಮಾರ್ಚ್​​ 14, ಮಾರ್ಚ್ 16, ಮಾರ್ಚ್​ 18 ಮತ್ತು ಮಾರ್ಚ್​ 20ರಂದು ಒಟ್ಟು 8 ಹಂತಗಳಲ್ಲಿ ಚುನಾವಣೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು.

ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಚುನಾವಣಾ ನೀತಿ ಸಂಹಿತೆಯನ್ನು ಜಾರಿ ಮಾಡಲಾಗಿತ್ತು. ಶೈಲೇಂದ್ರ ಕುಮಾರ್ ಮೊದಲ ಮತ್ತು ಎರಡನೇ ಹಂತದ ಚುನಾವಣೆಗಳಿಗೆ ಈಗಾಗಲೇ ಸುತ್ತೋಲೆ  ಹೊರಡಿಸಿದ್ದರು.

ಕೊನೆಯದಾಗಿ 2018ರಲ್ಲಿ ಪಂಚಾಯತ್​ ಚುನಾವಣೆಯನ್ನು ಪೀಪಲ್ಸ್​ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮತ್ತು ನ್ಯಾಷನಲ್ ಕಾನ್ಫೆರೆನ್ಸ್​ ​(ಎನ್​ಸಿ​) ಪಕ್ಷಗಳು ಬಹಿಷ್ಕರಿಸಿದ್ದವು. ಜಮ್ಮು ಕಾಶ್ಮೀರದ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಿ, ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡದ ಪರಿಸ್ಥಿತಿಗಳ ನಡುವೆಯೇ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ಮಂಗಳವಾರ ಎಲ್ಲಾ ಪಕ್ಷಗಳ ಜೊತೆ ಸಭೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com