ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ 50, 850 ಕೋಟಿ ಪಾವತಿಸಿದ ಕೇಂದ್ರ ಸರ್ಕಾರ

ಮಹತ್ವಕಾಂಕ್ಷೆಯ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ 50 ಸಾವಿರದ 850 ಕೋಟಿ ರೂಪಾಯಿಯನ್ನು ಪಾವತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಇದರಿಂದಾಗಿ ರೈತರ ಉತ್ಪನ್ನ ವೆಚ್ಚ ಹಾಗೂ ಮನೆಯ ವೆಚ್ಚಗಳನ್ನು ಸರಿದೂಗಿಸಿಕೊಳ್ಳಲು ನೆರವಾಗಲಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವ ದೆಹಲಿ: ಮಹತ್ವಕಾಂಕ್ಷೆಯ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ 50 ಸಾವಿರದ 850 ಕೋಟಿ ರೂಪಾಯಿಯನ್ನು ಪಾವತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಇದರಿಂದಾಗಿ ರೈತರ ಉತ್ಪನ್ನ ವೆಚ್ಚ ಹಾಗೂ ಮನೆಯ ವೆಚ್ಚಗಳನ್ನು ಸರಿದೂಗಿಸಿಕೊಳ್ಳಲು ನೆರವಾಗಲಿದೆ

ಈ ಯೋಜನೆ ಜಾರಿಯಾಗಿ ಫೆಬ್ರವರಿ 24ಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಯೋಜನೆಯಡಿ ಪ್ರಗತಿಯನ್ನು ಕೃಷಿ ಸಚಿವಾಲಯ ಹಂಚಿಕೊಂಡಿದೆ. ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಕಳೆದ ವರ್ಷ ಫೆಬ್ರವರಿ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಿದ್ದರು.

ಯೋಜನೆಯಡಿ ಮೂರು  ಕಂತುಗಳಲ್ಲಿ ವರ್ಷಕ್ಕೆ 6 ಸಾವಿರ ರೂಪಾಯಿಯನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗುತ್ತದೆ. ದೇಶಾದ್ಯಂತ ರೈತ ಕುಟುಂಬಗಳಿಗೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. 

ಕೇಂದ್ರ ಸರ್ಕಾರ ಈವರೆಗೂ 50 ಸಾವಿರದ 850 ಕೋಟಿ ಗೂ ಹೆಚ್ಚು ಹಣವನ್ನು ಬಿಡುಗಡೆ ಮಾಡಿದೆ. 2015-16ರ ಕೃಷಿ ಸಮೀಕ್ಷೆಯಂತೆ ಅಂದಾಜು 14 ಕೋಟಿ ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಕೃಷಿ ಸಚಿವಾಲಯ ತಿಳಿಸಿದೆ. 

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಫಲಾನುಭವಿಗಳನ್ನು ಗುರುತಿಸಲಿದ್ದು, 2 ಎಕರೆಯಷ್ಟು ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈ ಯೋಜನೆಯಡಿ ಆರ್ಥಿಕ ನೆರವನ್ನು ನೀಡಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com