ದೆಹಲಿಯಲ್ಲಿ ಸಿಎಎ ಪರ, ವಿರೋಧಿಗಳ ಘರ್ಷಣೆ: ಮುಖ್ಯಪೇದೆ ದಾರುಣ ಸಾವು, ಡಿಸಿಪಿಗೆ ಗಾಯ

ಈಶಾನ್ಯ ದೆಹಲಿಯಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿಗಳ ನಡುವಿನ ಘರ್ಷಣೆಯಲ್ಲಿ ಮುಖ್ಯ ಪೇದೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ
ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿಗಳ ನಡುವಿನ ಘರ್ಷಣೆಯಲ್ಲಿ ಮುಖ್ಯ ಪೇದೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೊಕುಲ್ ಪುರಿಯಲ್ಲಿನ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರತನ್ ಲಾಲ್ ಮೃತ ದುರ್ದೈವಿಯಾಗಿದ್ದಾನೆ. ಘರ್ಷಣೆ ವೇಳೆ ಉಪ ಪೊಲೀಸ್ ಆಯುಕ್ತರು, ಶಹದಾರಾ, ಅಮಿತ್ ಶರ್ಮಾ ಸೇರಿದಂತೆ ಅನೇಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಜಾಫ್ರಾಬಾದ್  ಹಾಗೂ ಮೌಜ್ ಪುರದಲ್ಲಿ ಎರಡನೇ ದಿನವಾದ ಇಂದು ಕೂಡಾ ಸಿಎಎ ಪರ ಹಾಗೂ ವಿರೋಧಿಗಳ ನಡುವೆ ಘರ್ಷಣೆ ನಡೆದಿದ್ದು, ಅನೇಕ ವಾಹನಗಳು, ಅಂಗಡಿಗಳು ಹಾಗೂ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಇದರಿಂದಾಗಿ ಈಶಾನ್ಯ ದೆಹಲಿಯಲ್ಲಿ ಪ್ರಕ್ಷುಬ್ದ ವಾತವಾರಣ ನಿರ್ಮಾಣವಾಗಿದೆ.

ಜಾಫ್ರಾಬಾದ್ ನ  ಚಾಂದ್ ಬಾಗ್ ಪ್ರದೇಶದಲ್ಲಿ ಹಿಂಸಾಚಾರ ಉಂಟಾಗಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಹಾಗೂ  ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಅಗ್ನಿ ನಂದಿಸಲು ಬಂದಂತಹ ಅಗ್ನಿಶಾಮಕ ವಾಹನವೊಂದಕ್ಕೆ ಪ್ರತಿಭಟನಾಕಾರರು ಹಾನಿಯನ್ನುಂಟುಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಫ್ರಾಬಾದ್  ಹಾಗೂ ಮೌಜ್ ಪುರ- ಬಾಬರ್ ಪುರ್ ದಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಪ್ರವೇಶ ಹಾಗೂ ನಿರ್ಗಮನವನ್ನು ಬಂದ್ ಮಾಡಲಾಗಿದೆ. ಈ ನಿಲ್ದಾಣಗಳಲ್ಲಿ ರೈಲುಗಳು ನಿಲುಗಡೆಯಾಗುವುದಿಲ್ಲ ಎಂದು ದೆಹಲಿ ಮೆಟ್ರೋ ರೈಲು ನಿಗಮ ಟ್ವಿಟ್ ಮಾಡಿದೆ.

ಹಿಂಸಾಚಾರದ ವೇಳೆಯಲ್ಲಿ ಭದ್ರತಾ ಪಡೆಗಳ ಮೇಲೂ ಕಲ್ಲು ತೂರಾಟ ನಡೆದ ಬಳಿಕ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 

ಉಪ ರಾಜ್ಯಪಾಲ ಅನಿಲ್ ಬೈಜಾಲ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಮುಖ್ಯಮಂತ್ರಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.ಪ್ರಕ್ಷುಬ್ದ ಪರಿಸ್ಥಿತಿ ಕ್ಷೀಣಿಸುವವರೆಗೂ ಈ ಪ್ರದೇಶದಲ್ಲಿ ಸಿಆರ್ ಪಿಎಫ್ ಯನ್ನು ನಿಯೋಜನೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com