ಟ್ರಂಪ್ ಭೇಟಿ ಬೆನ್ನಲ್ಲೇ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸ್ ಮುಖ್ಯ ಪೇದೆ ಸೇರಿ 5 ಸಾವು, 100 ಜನರಿಗೆ ಗಾಯ

ರಾಜಧಾನಿ ನವದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಭಾನುವಾರ ಸಂಜೆ ವೇಳೆಗೆ ನಡೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಿ ಹೋರಾಟಗಾರರ ನಡುವಣ ಸಂಘರ್ಷ, ಸೋಮವಾರ ತೀವ್ರ ಹಿಂಸಾ ಸ್ವರೂಪ ಪಡೆದುಕೊಂಡಿದ್ದು, ಘಟನೆಯಲ್ಲಿ ಪೊಲೀಸ್ ಮುಖ್ಯ ಪೇದೆ ಸೇರಿ ಐವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 
ಟ್ರಂಪ್ ಭೇಟಿ ಬೆನ್ನಲ್ಲೇ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾ: ಪೊಲೀಸ್ ಮುಖ್ಯ ಪೇದೆ ಸೇರಿ 4 ಸಾವು
ಟ್ರಂಪ್ ಭೇಟಿ ಬೆನ್ನಲ್ಲೇ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾ: ಪೊಲೀಸ್ ಮುಖ್ಯ ಪೇದೆ ಸೇರಿ 4 ಸಾವು

ನವದೆಹಲಿ: ರಾಜಧಾನಿ ನವದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಭಾನುವಾರ ಸಂಜೆ ವೇಳೆಗೆ ನಡೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಿ ಹೋರಾಟಗಾರರ ನಡುವಣ ಸಂಘರ್ಷ, ಸೋಮವಾರ ತೀವ್ರ ಹಿಂಸಾ ಸ್ವರೂಪ ಪಡೆದುಕೊಂಡಿದ್ದು, ಘಟನೆಯಲ್ಲಿ ಪೊಲೀಸ್ ಮುಖ್ಯ ಪೇದೆ ಸೇರಿ ಐವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

ಪ್ರತಿಭಟನಾ ಸ್ಥಳದಲ್ಲಿದ್ದ ಮನೆ, ಅಂಗಡಿ ಮುಂಗಟ್ಟು, ವಾಹನಗಳ ಮೇಲೆ ಎರಡೂ ಬಣಗಳು ಕಲ್ಲು ತೂರಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಹೀಗಾಗಿ ಜಫ್ರಾಬಾದ್ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದೆಹಲಿ ಭೇಟಿ ವೇಳೆಯೇ ಈ ಹಿಂಸಾಚಾ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಕೇಂದ್ರ ಸರ್ಕಾರಕ್ಕೆ ಮುಜುಗರ ತರಲೆಂದೇ ಉದ್ದೇಶಪೂರ್ವಕಾಗಿ ಹಿಂಸಾಚಾರ ನಡೆಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿವೆ. 

ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ ಪೊಲೀಸರ ಜೊತೆ ಸೋಮವಾರ ರಾತ್ರಿ ತುರ್ತು ಸಭೆ ನಡೆಸಿ, ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಪರಿಸ್ಥಿತಿ ಶಾಂತಿಗೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಕೇಜ್ರಿವಾಲ್, ಗೃಹ ಸಚಿವರಿಗೆ ಆಗ್ರಹಿಸಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿ 500ಕ್ಕೂ ಹೆಚ್ಚು ಮಹಿಳೆಯರು ಶನಿವಾರದಿಂದ ದೆಹಲಿಯ ಜಫ್ರಾಬಾದ್ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ಕೈಗೊಂಡಿದ್ದರು. ಇದರ ಹತ್ತಿರದಲ್ಲಿಯೇ ಇರುವ ಮೌಜ್ಜಾರ-ಬಾಬರ್ ಪುರ ಮೆಟ್ರೋ ನಿಲ್ದಾಣಗಳ ಬಳಿ ಭಾನುವಾರ ಸಂಜೆ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ನೇತೃತ್ವದ ಸಿಎಎ ಪರ ಹಾಗೂ ಸಿಎಎ ವಿರೋಧ ಬಣಗಳ ನಡುವೆ ಮಾರಾಮಾರಿ ನಡೆದಿತ್ತು. 

ಈ ಉಭಯ ಗುಂಪಿಗೆ ಸೇರಿದ ಹೋರಾಟಗಾರರು ಸೋಮವಾರ ಮತ್ತೆ ಜಫ್ರಾಬಾದ್, ಮೌಜ್ಜೌರ, ಕರ್ದಾಂಪುರಿ, ಚಾಂದ್ ಬಾಗ್, ದಯಾಲ್ ಪುರ ಪ್ರದೇಶಗಳಲ್ಲಿ ಬೀದಿಗಿಳಿದು ಹಿಂಸಾಚಾರ ನಡೆಸಿದ್ದಾರೆ. ಪರಸ್ಪರರಿಗೆ ಸೇರಿದ ಮನೆ, ಅಂಗಡಿ ಮುಂಗಟ್ಟು ವಾಹನಗಳ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿದ್ದಾರೆ. ಜೊತೆಗೆ ಪರಸ್ಪರರ ಮೇಲೂ ಕಲ್ಲೂ ತೂರಿದ್ದಾರೆ. 

ಈ ಹಿಂಸಾಚಾರದ ವೇಳೆ ಕಲ್ಲೇಟು ತಗುಲಿ ಗಾಯಗೊಂಡಿದ್ದ ಮುಖ್ಯ ಪೇದೆ ರತನ್ ಲಾಲ್ ಅವರು ಸಾವನ್ನಪ್ಪಿದ್ದಾರೆ. ಜೊತೆಗೆ ಮೂವರು ನಾಗರೀಕರು ಕೂಡ ಸಾವನ್ನಪ್ಪಿದ್ದಾರೆ. ಕಲ್ಲು ತೂರಾಟದ ವೇಳೆ ಡಿಸಿಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹಿಂಸಾಚಾರದ ಹಿನ್ನೆಲೆಯಲ್ಲಿ ಉದ್ವಗ್ನ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಗಾಳಿ ಸುದ್ದಿಗಳಿಗೆ ದೆಹಲಿ ಜನರು ಕಿವಿಗೊಡಬಾರದು. ಅಲ್ಲದೆ, ಶಾಂತಿ-ಸುವ್ಯವಸ್ಥೆಗೆ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com