ದೆಹಲಿ ಹಿಂಸಾಚಾರ: ಪಿಸ್ತೂಲ್ ಹಿಡಿದು ಪೊಲೀಸರತ್ತ ಗುಂಡು ಹಾರಿಸಿದ್ದ ಆರೋಪಿ ಬಂಧನ

ಪೌರತ್ವ ತಿದ್ದುಪಡಿ ವಿರೋಧಿಸಿ ದೆಹಲಿಯ ಜಫ್ರಾಬಾದ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಪಿಸ್ತೂಲ್ ಹಿಡಿದು ಪೊಲೀಸರ ನುಗ್ಗಿ ಆತಂಕ ಸೃಷ್ಟಿಸಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ. 
ದೆಹಲಿ ಹಿಂಸಾಚಾರ: ಪಿಸ್ತೂಲ್ ಹಿಡಿದು ಪೊಲೀಸರತ್ತ ಗುಂಡು ಹಾರಿಸಿದ್ದ ಆರೋಪಿ ಗುರುತು ಪತ್ತೆ
ದೆಹಲಿ ಹಿಂಸಾಚಾರ: ಪಿಸ್ತೂಲ್ ಹಿಡಿದು ಪೊಲೀಸರತ್ತ ಗುಂಡು ಹಾರಿಸಿದ್ದ ಆರೋಪಿ ಗುರುತು ಪತ್ತೆ

ನವದೆಹಲಿ: ಪೌರತ್ವ ತಿದ್ದುಪಡಿ ವಿರೋಧಿಸಿ ದೆಹಲಿಯ ಜಫ್ರಾಬಾದ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಪಿಸ್ತೂಲ್ ಹಿಡಿದು ಪೊಲೀಸರ ನುಗ್ಗಿ ಆತಂಕ ಸೃಷ್ಟಿಸಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ. 

ಪ್ರತಿಭಟನೆ ವೇಳೆ ಆರೋಪಿ ನಿಶ್ಯಸ್ತ್ರಧಾರಿ ಪೊಲೀಸ್'ಗೆ ಪಿಸ್ತೂಲ್ ತೋರಿಸಿದ್ದ. ಆಲ್ಲದೆ, ಗಾಳಿಯಲ್ಲಿ ಗುಂಡು ಹಾರಿಸಿ ಕೆಲ ಆತಂಕ ಸೃಷ್ಟಿಸಿ ಬಳಿಕ ಪ್ರತಿಭಟನಾಕಾರರ ಸಾಲಿನಲ್ಲಿ ಸೇರಿಕೊಂಡಿದ್ದ. ಈ ಘಟನೆಯ ವಿಡಿಯೋ ವೈರಲ್ ಆಗಿತ್ತು. 

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ್ದು, ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಪಿಸ್ತೂಲ್ ಹಿಡಿದ ವ್ಯಕ್ತಿ ಶಾರುಖ್ ಎಂದು ತಿಳಿದುಬಂದಿದ್ದು, ಆತನ ಬಂಧನಕ್ಕೆ ಬಲೆ ಬೀಸಿದ್ದರು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದು, ವಿಚಾರಣೆಗೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

ರಾಜಧಾನಿ ನವದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಭಾನುವಾರ ಸಂಜೆ ವೇಳೆಗೆ ನಡೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಿ ಹೋರಾಟಗಾರರ ನಡುವಣ ಸಂಘರ್ಷ, ಸೋಮವಾರ ತೀವ್ರ ಹಿಂಸಾ ಸ್ವರೂಪ ಪಡೆದುಕೊಂಡಿತ್ತು ಘಟನೆಯಲ್ಲಿ ಪೊಲೀಸ್ ಮುಖ್ಯ ಪೇದೆ ಸೇರಿ ಐವರು ಸಾವನ್ನಪ್ಪಿದ್ದಾರು, ಅಲ್ಲದೆ, ನೂರಾರು ಜನರು ಗಾಯಗೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com