ಉನ್ನಾವೊ ರೇಪ್ ಕೇಸು: ಶಾಸಕ ಸ್ಥಾನದಿಂದ ಕುಲದೀಪ್ ಸಿಂಗ್ ಸೆಂಗಾರ್ ಅನರ್ಹ 

ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾದ ನಂತರ ಕಳೆದ ವರ್ಷ ಬಿಜೆಪಿಯಿಂದ ಉಚ್ಛಾಟಿತಗೊಂಡಿದ್ದ ಕುಲದೀಪ್ ಸಿಂಗ್ ಸೆಂಗಾರ್ ನನ್ನು ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯತ್ವ ಸ್ಥಾನದಿಂದ ಅಂದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

Published: 25th February 2020 02:16 PM  |   Last Updated: 25th February 2020 02:16 PM   |  A+A-


Kuldeep Singh Sengar

ಕುಲದೀಪ್ ಸಿಂಗ್ ಸೆಂಗಾರ್

Posted By : Sumana Upadhyaya
Source : PTI

ಲಕ್ನೊ:ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾದ ನಂತರ ಕಳೆದ ವರ್ಷ ಬಿಜೆಪಿಯಿಂದ ಉಚ್ಛಾಟಿತಗೊಂಡಿದ್ದ ಕುಲದೀಪ್ ಸಿಂಗ್ ಸೆಂಗಾರ್ ನನ್ನು ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯತ್ವ ಸ್ಥಾನದಿಂದ ಅಂದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.


ಈ ಬಗ್ಗೆ ನೊಟೀಸ್ ಜಾರಿ ಮಾಡಲಾಗಿದ್ದು, ದೆಹಲಿ ಕೋರ್ಟ್ ಆದೇಶದ ಪ್ರಕಾರ ತಪ್ಪಿತಸ್ಥ ಎನಿಸಿಕೊಂಡ ಕುಲದೀಪ್ ನನ್ನು ವಿಧಾನಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇವರು ಉನ್ನಾವೊದ ಬಂಗರ್ಮೌ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆರಿಸಿ ಬಂದಿದ್ದರು.


ಕಳೆದ ವರ್ಷ ಡಿಸೆಂಬರ್ 20ರಂದು ಕುಲದೀಪ್ ಗೆ ಜೀವಾವಧಿ ಶಿಕ್ಷೆ ನೀಡಿ ದೆಹಲಿ ಕೋರ್ಟ್ ಆದೇಶ ನೀಡಿತ್ತು. ಅಲ್ಲಿಂದ ಅವರ ಶಾಸಕ ಹುದ್ದೆ ಅನರ್ಹಗೊಂಡಿತ್ತು. ನಾಲ್ಕು ಬಾರಿ ಶಾಸಕರಾಗಿದ್ದ ಸೆಂಗಾರ್ ನನ್ನು ಕಳೆದ ವರ್ಷ ಆಗಸ್ಟ್ ನಲ್ಲಿಯೇ ಬಿಜೆಪಿ ಪಕ್ಷದಿಂದ ವಜಾ ಮಾಡಿತ್ತು. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp