ಕೂಡಲೇ ಹಿಂಸಾಚಾರ ನಿಲ್ಲಿಸಿ: ಪ್ರತಿಭಟನಾನಿರತ ದೆಹಲಿ ಜನತೆಗೆ ಸಿಎಂ ಕೇಜ್ರಿವಾಲ್ ಮನವಿ

ನಗರದ ಕೆಲ ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಆತಂಕವಾಗುತ್ತಿದೆ. ನಾವೆಲ್ಲರೂ ಸೇರಿ ದೆಹಲಿಯಲ್ಲಿ ಶಾಂತಿ ಮರುಸ್ಥಾಪನೆಗೆ ಪ್ರಯತ್ನಿಸಬೇಕಿದೆ. ಹಿಂಸಾಚಾರವನ್ನು ಕೂಡಲೇ ನಿಲ್ಲಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮನವಿ ಮಾಡಿಕೊಂಡಿದ್ದಾರೆ. 
ಕೇಜ್ರಿವಾಲ್
ಕೇಜ್ರಿವಾಲ್

ನವದೆಹಲಿ: ನಗರದ ಕೆಲ ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಆತಂಕವಾಗುತ್ತಿದೆ. ನಾವೆಲ್ಲರೂ ಸೇರಿ ದೆಹಲಿಯಲ್ಲಿ ಶಾಂತಿ ಮರುಸ್ಥಾಪನೆಗೆ ಪ್ರಯತ್ನಿಸಬೇಕಿದೆ. ಹಿಂಸಾಚಾರವನ್ನು ಕೂಡಲೇ ನಿಲ್ಲಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮನವಿ ಮಾಡಿಕೊಂಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ದೆಹಲಿಯ ಕೆಲ ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಆತಂಕ ಶುರುವಾಗಿದೆ. ನಮ್ಮ ನಗರದಲ್ಲಿ ಶಾಂತಿ ಮರುಸ್ಥಾಪನೆಗೆ ಎಲ್ಲರೂ ಪ್ರಯತ್ನಿಸಬೇಕಿದೆ. ಹಿಂಸಾಚಾರವನ್ನು ಕೂಡಲೇ ನಿಲ್ಲಿಸುವಂತೆ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ಹೇಳಿದ್ದಾರೆ. 

ಅಲ್ಲದೆ, ಹಿಂಸಾಚಾರ ನಡೆದಿರುವ ಕ್ಷೇತ್ರಗಳ ಎಲ್ಲಾ ಶಾಸಕರು ಮತ್ತು ಹಿರಿಯ ಅಧಿಕಾರಿಗಳನ್ನು ಶೀಘ್ರದಲ್ಲಿಯೇ ಭೇಟಿಯಾಗಲಿದ್ದೇನಂದು ತಿಳಿಸಿದ್ದಾರೆ. 

ರಾಜಧಾನಿ ನವದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಭಾನುವಾರ ಸಂಜೆ ವೇಳೆಗೆ ನಡೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಿ ಹೋರಾಟಗಾರರ ನಡುವಣ ಸಂಘರ್ಷ, ಸೋಮವಾರ ತೀವ್ರ ಹಿಂಸಾ ಸ್ವರೂಪ ಪಡೆದುಕೊಂಡಿತ್ತು ಘಟನೆಯಲ್ಲಿ ಪೊಲೀಸ್ ಮುಖ್ಯ ಪೇದೆ ಸೇರಿ ಐವರು ಸಾವನ್ನಪ್ಪಿದ್ದಾರು, ಅಲ್ಲದೆ, ನೂರಾರು ಜನರು ಗಾಯಗೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com