ಭೀಮಾ ಕೋರೆಗಾಂವ್ ಕೇಸ್ ಗಳನ್ನು ಹಿಂಪಡೆದ ಮಹಾ ಸರ್ಕಾರ

ಭೀಮಾ- ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ 348 ಪ್ರಕರಣಗಳನ್ನು ಹಾಗೂ ಮರಾಠ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದ 460 ಕೇಸ್ ಗಳನ್ನು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಗುರುವಾರ ವಾಪಾಸ್ ಪಡೆದಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮುಂಬೈ: ಭೀಮಾ- ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ 348 ಪ್ರಕರಣಗಳನ್ನು ಹಾಗೂ ಮರಾಠ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದ 460 ಕೇಸ್ ಗಳನ್ನು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಗುರುವಾರ ವಾಪಾಸ್ ಪಡೆದಿದೆ.

ಭೀಮಾ- ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ 649 ಕೇಸ್ ಗಳ ಪೈಕಿ 348 ಕೇಸ್ ಗಳನ್ನು ಹಾಗೂ ಮರಾಠ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ 548 ಕೇಸ್ ಗಳ ಪೈಕಿ 460 ಕೇಸ್ ಗಳನ್ನು ಸರ್ಕಾರ ಹಿಂಪಡೆದಿದೆ ಎಂದು ಗೃಹ ಸಚಿವ ಅನಿಲ್ ದೇಶಮುಖ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದ ಇತರೆ ಪ್ರಕರಣಗಳನ್ನು ಹಿಂಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

2018, ಜನವರಿ 1ರಂದು ನಡೆದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣವನ್ನು ಕಳೆದ ತಿಂಗಳು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಿತ್ತು. ಆದರೆ ಇದಕ್ಕೆ ಮಹಾರಾಷ್ಟ್ರ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಭೀಮಾ ಕೋರೆಗಾಂವ್ ನಲ್ಲಿ ಸಂಬಂಧಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅನೇಕ ಯುವಕರು, ಮಹಿಳೆಯರು ಹಾಗೂ ದಲಿತ ಹೋರಾಟಗಾರ ಮೇಲೆ ಕೇಸ್ ಗಳನ್ನು ಹಾಕಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com