ದೆಹಲಿ ಹಿಂಸಾಚಾರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಯಾದ ಕಾಂಗ್ರೆಸ್ ನಿಯೋಗ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ ಹಿನ್ನೆಲೆಯಲ್ಲಿ ಸೋನಿಯಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ  ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ರಾಜಧರ್ಮ ಪಾಲಸಲು ಸೂಚನೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. 

Published: 27th February 2020 01:41 PM  |   Last Updated: 27th February 2020 01:41 PM   |  A+A-


Sonia -led Congress delegation meets President Kovind over Delhi riots

ದೆಹಲಿ ಹಿಂಸಾಚಾರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಯಾದ ಕಾಂಗ್ರೆಸ್ ನಿಯೋಗ

Posted By : Manjula VN
Source : The New Indian Express

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ ಹಿನ್ನೆಲೆಯಲ್ಲಿ ಸೋನಿಯಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ  ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ರಾಜಧರ್ಮ ಪಾಲಸಲು ಸೂಚನೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. 

ನಿಯೋಗದಲ್ಲಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಪಿ.ಚಿದಂಬರಂ, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್, ಕೆಸಿ ವೇಣುಗೋಪಾಲ್, ಪ್ರಿಯಾಂಕಾ ಗಾಂಧಿ ವಾದ್ರಾ, ಆನಂದ್ ಶರ್ಮಾ, ರಂಜೀಪ್ ಸುರ್ಜೇವಾಲಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. 

ಭೇಟಿ ಬಳಿಕ ಪ್ರತಿಕ್ರಿಯೆ ನೀಡಿರುವ ಮನಮೋಹನ್ ಸಿಂಗ್ ಅವರು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಪರಮಾಧಿಕಾರ ಪ್ರಯೋಗಿಸಿ ಮಧ್ಯಪ್ರವೇಶ ಮಾಡಿ ಕೇಂದ್ರ ಸರ್ಕಾರಕ್ಕೆ ರಾಜಧರ್ಮವನ್ನು ಪಾಲಿಸುವಂತೆ ಸೂಚನೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದೇವೆಂದು ಹೇಳಿದ್ದಾರೆ. 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತನಾಡಿ, ಕೇಂದ್ರ ಸರ್ಕಾರದ ವೈಫಲ್ಯದಿಂದ ಗಲಭೆ ನಡೆದಿದೆ. ಅಗತ್ಯ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗಲಭೆ ನಿಯಂತ್ರಣಕ್ಕೆ ಬಂದಿಲ್ಲ. ಈ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ ವಿಫಲರಾಗಿದ್ದಾರೆ. ದಹಲಿ ಗಲಭೆ ದೇಶ ನಾಚುವಂತಹದ್ದು. ಈ ಹಿನ್ನೆಲೆಯಲ್ಲಿ ಗೃಹ ಸಚಿವರ ಬದಲಾವಣೆಗೆ ರಾಷ್ಟ್ರಪತಿಗಳ ಬಳಿ ಮನವಿ ಸಲ್ಲಿಸಿದ್ದೇವೆಂದು ತಿಳಿಸಿದ್ದಾರೆ. 

ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುವ ಖರ್ಗೆ ಮಾತನಾಡಿ, ದೆಹಲಿ ಹಿಂಸಾಚಾರವಾಗಿ ನಾವು ರಾಜಕೀಯ ಮಾಡುತ್ತಿಲ್ಲ. ವಸ್ತುಸ್ಥಿತಿಯ ಅವಲೋಕನವನ್ನು ಮಾಡಿ ರಾಷ್ಟ್ರಪತಿಗಳ ಮುಂದಿಟ್ಟಿದ್ದೇವೆ. ಇದು ರಾಷ್ಟ್ರೀಯ ಪಕ್ಷವಾಗಿರುವ ನಮ್ಮ ಜವಾಬ್ದಾರಿಯೂ ಆಗಿದೆ ಎಂದಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp