ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಎಫ್ಐಆರ್: ಆಪ್ ನಿಂದ ತಹಿರ್ ಹುಸೇನ್ ಅಮಾನತು 

ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದ ಎಫ್ಐಆರ್ ನಲ್ಲಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೇನ್ ಹೆಸರು ಉಲ್ಲೇಖವಾಗಿದ್ದು, ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ. 

Published: 28th February 2020 12:32 AM  |   Last Updated: 28th February 2020 12:43 AM   |  A+A-


councillor Tahir Hussain

ತಹಿರ್ ಹುಸೇನ್

Posted By : Srinivas Rao BV
Source : Online Desk

ನವದೆಹಲಿ: ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದ ಎಫ್ಐಆರ್ ನಲ್ಲಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೇನ್ ಹೆಸರು ಉಲ್ಲೇಖವಾಗಿದ್ದು, ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ. 

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪೊಲೀಸ್ ತನಿಖೆಯಲ್ಲಿ ತಾಹಿರ್ ಹುಸೇನ್ ನ ಮೇಲೆ ಶಂಕೆ ವ್ಯಕ್ತವಾಗಿದ್ದು ಆತನ ವಿರುದ್ಧ 302 ಐಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. ಇದಕ್ಕೂ ಮುನ್ನ ವಿಡಿಯೋ ಹೇಳಿಕೆ ನೀಡಿದ್ದ ಹುಸೇನ್, ತಾನು ಈ ಪ್ರಕರಣದಲ್ಲಿ ಅಮಾಯಕ, ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ ಗಲಭೆಯ ನಾನೂ ಸಹ ಸಂತ್ರಸ್ತನಾಗಿದ್ದೇನೆ ಎಂದು ಹೇಳಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Online education learning

ಆನ್‌ಲೈನ್ ಕಲಿಕೆಯ ಪ್ರಯೋಗವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹಾರ್ವರ್ಡ್ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp