ಗುಪ್ತಚರ ಅಧಿಕಾರಿ ಕೊಲೆ ಆರೋಪ: ಕಾರ್ಪೊರೇಟರ್‌ ತಾಹಿರ್‌ ಪಕ್ಷದಿಂದ ಅಮಾನತು ಮಾಡಿದ ಎಎಪಿ

ದೆಹಲಿ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಸಾವಿಗೆ ಸಂಬಂಧಿಸಿದಂತೆ ಆಪ್ ಕೌನ್ಸಿಲರ್‌ ತಾಹಿರ್‌ ಹುಸೇನ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆಯೇ ಅತ್ತ ಆಮ್ ಆದ್ಮಿ ಪಕ್ಷ ತಾಹಿರ್‌ ಹುಸೇನ್‌ರನ್ನು ಪಕ್ಷದಿಂದ ಅಮಾನತು ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೆಹಲಿ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಸಾವಿಗೆ ಸಂಬಂಧಿಸಿದಂತೆ ಆಪ್ ಕೌನ್ಸಿಲರ್‌ ತಾಹಿರ್‌ ಹುಸೇನ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆಯೇ ಅತ್ತ ಆಮ್ ಆದ್ಮಿ ಪಕ್ಷ ತಾಹಿರ್‌ ಹುಸೇನ್‌ರನ್ನು ಪಕ್ಷದಿಂದ ಅಮಾನತು ಮಾಡಿದೆ.

ಗುಪ್ತಚರ ವಿಭಾಗದ (ಐಬಿ) ಅಧಿಕಾರಿ ಅಂಕಿತ್‌ ಶರ್ಮಾ ಅವರ ಹತ್ಯೆಗೆ ಸಂಬಂಧಿಸಿ ಎಎಪಿಯ ಕೌನ್ಸಿಲರ್‌ ತಾಹಿರ್‌ ಹುಸೇನ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹತ್ಯೆಯ ಹಿಂದೆ ತಾಹಿರ್‌ ಕೈವಾಡ ಇದೆ ಎಂದು ಅಂಕಿತ್‌ ಅವರ ತಂದೆ ರವೀಂದ್ರ ಶರ್ಮಾ ಆರೋಪಿಸಿದ್ದರು.  

ತಾಹಿರ್‌ ಅವರ ಮಾಲೀಕತ್ವದ ಐದು ಅಂತಸ್ತಿನ ಕಟ್ಟಡದ ತಾರಸಿಯಿಂದ ಕಲ್ಲು ಮತ್ತು ಪೆಟ್ರೋಲ್‌ ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ಸ್ಥಳೀಯರೂ ಆರೋಪಿಸಿದ್ದರು. ಹಿಂಸಾಚಾರದಲ್ಲಿ ತಾಹಿರ್‌ ಕೈವಾಡ ಇದೆ ಎಂದು ಬಿಜೆಪಿ ಮುಖಂಡ ಕಪಿಲ್‌ ಮಿಶ್ರಾ ಅವರೂ ಆರೋಪಿಸಿದ್ದರು. ತಾಹಿರ್‌ ವಿರುದ್ಧ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಿಸಲಾಗಿದೆ.  ಇದೇ ಹಿನ್ನೆಲೆಯಲ್ಲಿ ಎಎಪಿಯು ತಾಹಿರ್‌ ಹುಸೇನ್‌ನನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿ ಗುರುವಾರ ರಾತ್ರಿ ಆದೇಶ ಹೊರಡಿಸಿದೆ. 

ಇನ್ನು ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಿಎಂ ಕೇಜ್ರಿವಾಲ್ ಹಿಂಸಾಚಾರ ಸಂತ್ರಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದರು. ಅಲ್ಲದೆ ಹಿಂಸಾಚಾರದಲ್ಲಿ ಆಪ್ ನಾಯಕರು ಪಾಲ್ಗೊಂಡಿದ್ದರೆ ಅವರಿಗೆ ದುಪ್ಪಟ್ಟು ಶಿಕ್ಷೆ ನೀಡುವಂತೆ ಆಗ್ರಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com