ರಾಹುಲ್ ಗಾಂಧಿ, ಸೋನಿಯಾ ಗಾಂಧಿ
ದೇಶ
ದ್ವೇಷ ಭಾಷಣ ಆರೋಪ ಮೇಲೆ ರಾಹುಲ್, ಸೋನಿಯಾ ವಿರುದ್ಧ ಎಫ್ಐಆರ್ ಕೋರಿ ಅರ್ಜಿ: ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ದ್ವೇಷ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ನವದೆಹಲಿ: ದ್ವೇಷ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಸಿ ಹರಿ ಶಂಕರ್ ಅವರನ್ನೊಳಗೊಂಡ ನ್ಯಾಯಪೀಠ ಗೃಹ ಸಚಿವಾಲಯ, ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ನೊಟೀಸ್ ಜಾರಿ ಮಾಡಿದೆ. ಮನವಿಯಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆಪ್ ಶಾಸಕ ಅಮನತುಲ್ಲಾ ಖಾನ್, ಎಐಎಂಐಎಂ ನಾಯಕರಾದ ವಾರಿಸ್ ಪಠಾಣ್ ಮತ್ತು ಅಕ್ಬುರುದ್ದೀನ್ ಒವೈಸಿ ವಿರುದ್ಧ ಸಹ ಎಫ್ಐಆರ್ ದಾಖಲಿಸುವಂತೆ ಕೋರಲಾಗಿದೆ.
ದ್ವೇಷದ ಭಾಷಣ ಕೇಸಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ ಆ ಮೂಲಕ ವಿಚಾರಣೆ ಮಾಡಬೇಕೆಂದು ಸಹ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ