ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ.5ರಷ್ಟು ಮೀಸಲಾತಿ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್

ಶಿಕ್ಷಣದಲ್ಲಿ ಅಲ್ಪ ಸಂಖ್ಯಾತರಿಗೆ ಶೇ. 5ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಸರ್ಕಾರ ಉದ್ದೇಶಿಸಿದೆ ಎಂದು ಮಹಾರಾಷ್ಟ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರು ಶುಕ್ರವಾರ ಹೇಳಿದ್ದಾರೆ.
ನವಾಬ್ ಮಲಿಕ್
ನವಾಬ್ ಮಲಿಕ್

ಮುಂಬೈ: ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಸರ್ಕಾರ ಉದ್ದೇಶಿಸಿದೆ ಎಂದು ಮಹಾರಾಷ್ಟ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರು ಶುಕ್ರವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಈ ಸಂಬಂಧ ಶೀಘ್ರದಲ್ಲೇ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿ ಅಂಗೀಕರಿಸಲಿದೆ ಎಂದು ನವಾಬ್ ಮಲಿಕ್ ಅವರು ಇಂದು ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಸದಸ್ಯ ಶರದ್ ರಣ್ಪಿಸೆ ಅವರ ಪ್ರಶ್ನೆಗೆ ಉತ್ತರಿಸಿದ ನವಾಬ್ ಮಲಿಕ್ ಅವರು, ಶಾಲೆಗಳಲ್ಲಿ ಪ್ರವೇಶಾತಿ ಆರಂಭವಾಗುವ ಮುನ್ನವೇ ಸರ್ಕಾರ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲಾತಿ ಒದಗಿಸುವ ಕಾನೂನು ಜಾರಿಗೆ ತರಲಿದೆ ಎಂದು ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com