ಕನ್ಹಯ್ಯಾ ಕುಮಾರ್ ವಿರುದ್ಧ ದೇಶದ್ರೋಹ ಪ್ರಕರಣ: ಎಎಪಿ ಟೀಕಿಸಿದ ಚಿದಂಬರಂ 

ಜೆಎನ್ ಯು ವಿಶ್ವವಿದ್ಯಾಲಯ ವಿದ್ಯಾರ್ಥಿ ಘಟಕದ ಮಾಜಿ ನಾಯಕ ಕನ್ಹಯ್ಯಾ ಕುಮಾರ್ ಹಾಗೂ ಇತರ ಒಂಬತ್ತು ಮಂದಿಯ ವಿರುದ್ಧದ ದೇಶದ್ರೋಹ ಪ್ರಕರಣದ ವಿಚಾರಣೆಗೆ ಸೈ ಎಂದಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರವನ್ನು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಟೀಕಿಸಿದ್ದಾರೆ.
ಚಿದಂಬರಂ, ಕನ್ಹಯ್ಯಾ ಕುಮಾರ್
ಚಿದಂಬರಂ, ಕನ್ಹಯ್ಯಾ ಕುಮಾರ್

ನವದೆಹಲಿ: ಜೆಎನ್ ಯು ವಿಶ್ವವಿದ್ಯಾಲಯ ವಿದ್ಯಾರ್ಥಿ ಘಟಕದ ಮಾಜಿ ನಾಯಕ ಕನ್ಹಯ್ಯಾ ಕುಮಾರ್ ಹಾಗೂ ಇತರ ಒಂಬತ್ತು ಮಂದಿಯ ವಿರುದ್ಧದ ದೇಶದ್ರೋಹ ಪ್ರಕರಣದ ವಿಚಾರಣೆಗೆ ಸೈ ಎಂದಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರವನ್ನು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಟೀಕಿಸಿದ್ದಾರೆ.

ದೇಶದ್ರೋಹ ಪ್ರಕರಣದ ತಿಳುವಳಿಕೆಯಲ್ಲಿ ಕಡಿಮೆ ಮಾಹಿತಿ ಹೊಂದಿರುವುದರಲ್ಲಿ ಕೇಂದ್ರ ಸರ್ಕಾರಕ್ಕಿಂಲೂ ದೆಹಲಿ ಸರ್ಕಾರ ಕಡಿಮೆಯೇನೂ ಇಲ್ಲ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಕನ್ಹಾಯ್ಯಾ ಕುಮಾರ್ ಹಾಗೂ ಇತರರ ವಿರುದ್ಧ ಐಪಿಸಿ ಸೆಕ್ಷನ್ 124 ಎ ಮತ್ತು 120 ಬಿ ಅಡಿಯಲ್ಲಿ ದಾಖಲಿಸಿರುವ ಪ್ರಕರಣದ ವಿಚಾರಣೆಗೆ ಅನುಮತಿ ನೀಡಿರುವುದು ಒಪ್ಪಿಕೊಳ್ಳಲಾಗದು ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 2016ರಲ್ಲಿ ಕನ್ಹಾಯ್ಯಾ ಕುಮಾರ್  ನೇತೃತ್ವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇಶದ್ರೋಹ ಘೋಷಣೆ ಕೂಗಲಾಗಿತ್ತು ಎಂದು ಆರೋಪಿಸಿ ದೆಹಲಿ ಪೊಲೀಸರು ಕಳೆದ ವರ್ಷ ಸಿಟಿ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ದಾಖಲಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com