ಹೊಸವರ್ಷದಂದು ಜಮ್ಮುಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: 2 ಯೋಧರು ಹುತಾತ್ಮ, ಮುಂದುವರೆದ ಕಾರ್ಯಾಚರಣೆ

ಹೊಸವರ್ಷದ ದಿನದಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ರಜೌರಿ ಜಿಲ್ಲೆಯ ನೌಶೆರಾದಲ್ಲಿ ಬುಧವಾರ  ನಡೆದಿದೆ. 

Published: 01st January 2020 10:46 AM  |   Last Updated: 01st January 2020 10:46 AM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಶ್ರೀನಗರ: ಹೊಸವರ್ಷದ ದಿನದಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ರಜೌರಿ ಜಿಲ್ಲೆಯ ನೌಶೆರಾದಲ್ಲಿ ಬುಧವಾರ  ನಡೆದಿದೆ. 

ನೌಶೆರಾ ದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿದಿದ್ದ ಸೇನಾಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಇಬ್ಬರು ಭಾರತೀಯ ಯೋಧರು ವೀರಮರವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 250 ಉಗ್ರರು ಸಕ್ರಿಯರಾಗಿದ್ದು, ಇದರಲ್ಲಿ 100 ಮಂದಿ ವಿದೇಶಿಗರು ಹಾಗೂ ಇನ್ನುಳಿದವರು ಸ್ಥಳೀಯರಾಗಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ ಬಾಘ್ ಸಿಂಗ್ ಅವರು ಹೇಳಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp