ಕರ್ನಾಟಕ ರಾಜ್ಯ ಕೆಲ ಮಟ್ಟಿಗೆ ಮಹದಾಯಿ ನೀರು ತಿರುಗಿಸಿದೆ: ಗೋವಾ ಸಿಎಂ ಆರೋಪ

ಮಹದಾಯಿ (ಕಳಸಾ-ಬಂಡೂರಿ) ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದರೂ, ಕರ್ನಾಟಕ ರಾಜ್ಯವು ಮಹದಾಯಿ ನದಿಯನ್ನು ಕೆಲ ಮಟ್ಟಿಗೆ ತಿರುಗಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಆರೋಪಿಸಿದ್ದಾರೆ. 
ಗೋವಾ ಮುಖ್ಯಮಂತ್ರಿ
ಗೋವಾ ಮುಖ್ಯಮಂತ್ರಿ

ಪಣಜಿ: ಮಹದಾಯಿ (ಕಳಸಾ-ಬಂಡೂರಿ) ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದರೂ, ಕರ್ನಾಟಕ ರಾಜ್ಯವು ಮಹದಾಯಿ ನದಿಯನ್ನು ಕೆಲ ಮಟ್ಟಿಗೆ ತಿರುಗಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಆರೋಪಿಸಿದ್ದಾರೆ. 

ಹೊಸ ವರ್ಷದ ಮುನ್ನಾ ದಿನ ದೂರದರ್ಶನಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಮಹದಾಯಿ ನದಿ ನೀರನ್ನು ಕೆಲಮಟ್ಟಿಗೆ ತಿರುಗಿಸಲಾಗಿದೆ ಎಂಬುದನ್ನು ನಾವು ಒಪ್ಪಲೇಬೇಕು. ಅದನ್ನು ನಿರಾಕರಿಸಲಾಗದು ಎಂದು ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಇನ್ನು ಕುಡಿಯುವ ನೀರಿನ ಯೋಜನೆಗಳಿಗೆ ಪರಿಸರ ಅನುಮೋದನೆ ಅಗತ್ಯವಿಲ್ಲ ಎಂದು ಕರ್ನಾಟಕದ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬರೆದ ಪತ್ರಕ್ಕೆ ಯಾವುದೇ ಕಾನೂನಿನ ಮಾನ್ಯತೆ ಇಲ್ಲ. ಏಕೆಂದರೆ, ವಿವಾದ ಸುಪ್ರೀಂಕೋರ್ಟ್ ಅಂಗಳದಲ್ಲಿದೆ ಎಂದು ಸಾವಂತ್ ತಿಳಿಸಿದ್ದಾರೆ. 

ಗೋವಾ ಸರ್ಕಾರ ಮಹದಾಯಿ ವಿಚಾರದಲ್ಲಿ ರಾಜಿಯಾಗಲು ಸಿದ್ಧವಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com