ಹೊಸ ವರ್ಷದ ದಿನದಂದೂ ಗಡಿಯಲ್ಲಿ ಪಾಕ್ ಉದ್ಧಟತನ: ಭಾರತೀಯ ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ

ಹೊಸ ವರ್ಷದ ದಿನದಂದೂ ಕೂಡ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಉದ್ಧಟತನ ಪ್ರದರ್ಶಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ಮಾಹಿತಿ ನೀಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ಹೊಸ ವರ್ಷದ ದಿನದಂದೂ ಕೂಡ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಉದ್ಧಟತನ ಪ್ರದರ್ಶಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ಮಾಹಿತಿ ನೀಡಿದ್ದಾರೆ. 

ಬುಧವಾರ ರಾತ್ರಿ ಪಾಕಿಸ್ತಾನ ಸೇನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡು ಹಾಗೂ ಶೆಲ್ ಗಳ ಮೂಲಕ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. 

ಪೂಂಚ್ ಜಿಲ್ಲೆ ಕೃಷ್ಣ ಘಾಟಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ ಎಂದು ವಕ್ತಾರರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com