ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಸಂವಿಧಾನ ಬಾಹಿರ: ಕೇರಳ ರಾಜ್ಯಪಾಲ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರದ್ದುಗೊಳಿಸುವಂತೆ ಒತ್ತಾಯಿಸಿ ರಾಜ್ಯ ವಿಧಾನಸಭೆ ನಿರ್ಣಯ ಅಂಗೀಕರಿಸಿರುವುದು ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಅವರು ಗುರುವಾರ ಹೇಳಿದ್ದಾರೆ.
ಆರಿಫ್ ಮೊಹಮ್ಮದ್
ಆರಿಫ್ ಮೊಹಮ್ಮದ್

ತಿರುವನಂತಪುರಂ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರದ್ದುಗೊಳಿಸುವಂತೆ ಒತ್ತಾಯಿಸಿ ರಾಜ್ಯ ವಿಧಾನಸಭೆ ನಿರ್ಣಯ ಅಂಗೀಕರಿಸಿರುವುದು ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಅವರು ಗುರುವಾರ ಹೇಳಿದ್ದಾರೆ.

ಪೌರತ್ವ ಕೇಂದ್ರ ಪಟ್ಟಿಯಲ್ಲಿ ಬರುತ್ತದೆ ಮತ್ತು ಇದು ಕೇಂದ್ರ ಸರ್ಕಾರದ ನಿರ್ಧಾರ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇರುವುದಿಲ್ಲ ಎಂದು ರಾಜ್ಯಪಾಲರು ವರದಿಗಾರರಿಗೆ ತಿಳಿಸಿದ್ದಾರೆ.

ಪೌರತ್ವ ವಿಚಾರ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏನು ಮಾಡಲು ಬರುವುದಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅನಗತ್ಯವಾಗಿ ಸಮಯ ಹಾಳು ಮಾಡುತ್ತಿದೆ. ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿರುವುದು ಕಾನೂನು ಬಾಹಿರ ಎಂದು ಹೇಳಿದ್ದಾರೆ.

ಪೌರತ್ವ ಕಾಯ್ದೆ ಕೇರಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ ಇಲ್ಲಿ ಯಾವುದೇ ಅಕ್ರಮ ವಲಸಿಗರು ಇಲ್ಲ. ಹೀಗಾಗಿ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com