2020 ರ ಗಣರಾಜ್ಯೋತ್ಸವ: ಪಶ್ಚಿಮ ಬಂಗಾಳ, ಮಹಾರಾಷ್ಟ್ರ ನಂತರ ಬಿಹಾರ ಟ್ಯಾಬ್ಲೋ ತಿರಸ್ಕಾರ

ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್​ಗೆ ಬಿಹಾರದ  ಸ್ತಬ್ಧಚಿತ್ರವನ್ನು ತಿರಸ್ಕರಿಸಲಾಗಿದೆ.

Published: 03rd January 2020 09:11 AM  |   Last Updated: 03rd January 2020 09:32 AM   |  A+A-


nithish Kumar

ನಿತೀಶ್ ಕುಮಾರ್

Posted By : Shilpa D
Source : PTI

ಪಾಟ್ನಾ: ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್​ಗೆ ಬಿಹಾರದ  ಸ್ತಬ್ಧಚಿತ್ರವನ್ನು ತಿರಸ್ಕರಿಸಲಾಗಿದೆ.

ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ನಂತರ ಬಿಹಾರ ರಾಜ್ಯ ಕಳಿಸಿದ್ದ ಸ್ತಬ್ಧಚಿತ್ರಗಳ ಪ್ರಸ್ತಾವನೆ ತಿರಸ್ಕೃತಗೊಂಡಿದೆ ಎಂದು  ಬಿಹಾರ ಮಾಹಿತಿ ಕೇಂದ್ರ ಸ್ಪಷ್ಟ ಪಡಿಸಿದೆ.

ತಜ್ಞರ ಸಮಿತಿಯ ಆಕ್ಷೇಪಣೆ ನಂತರ ಪ್ರಸ್ತಾಪನೆಯನ್ನು ತಿರಸ್ಕರಿಸಲಾಗಿದೆ ಎಂದು ರಕ್ಷಣಾ ಖಾತೆ ಹೇಳಿದೆ. ಬಂಗಾಳ ಸರ್ಕಾರ ಕನ್ಯಾಶ್ರೀ, ಹಸಿರು ರಕ್ಷಣೆ -ಸ್ವಚ್ಛ ಪರಿಸರ ಹಾಗೂ ಜಲ ಧಾರೆ ಪರಿಕಲ್ಪನೆಯ ಪ್ರಸ್ತಾಪನೆಗಳನ್ನು ಸಲ್ಲಿಸಿತ್ತು. ವಿಶಿಷ್ಟ ಪರಿಕಲ್ಪನೆ ಟ್ಯಾಬ್ಲೋ ಆಯ್ಕೆಗೆ ಪ್ರಧಾನ ಮಾನದಂಡ. ಈ ಮೂರರಲ್ಲಿ ಯಾವುದೂ ವಿಶಿಷ್ಟವಲ್ಲ

ತಜ್ಞರ ಸಮಿತಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಹಾಗೂ ವಿವಿಧ ಇಲಾಖೆಗಳ ಟ್ಯಾಬ್ಲೋ ಪ್ರಸ್ತಾಪನೆಗಳನ್ನು ಪರಿಶೀಲಿಸಿ ಪ್ರದರ್ಶನದಲ್ಲಿ ಪಾಲ್ಗೊಳ್ಳುವ ಸ್ತಬ್ಧಚಿತ್ರಗಳನ್ನು ಅಂತಿಮಗೊಳಿಸುತ್ತದೆ.

2020ರ ಗಣರಾಜ್ಯೋತ್ಸವ ಪರೇಡ್​ನಲ್ಲಿ ಭಾಗವಹಿಸಲು ರಾಜ್ಯಗಳಿಂದ 32 ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 24 ಪ್ರವೇಶಗಳು ಬಂದಿದ್ದವು. ಆ ಪೈಕಿ ಒಟ್ಟು 22 ಪ್ರಸ್ತಾಪನೆಗಳನ್ನು ಅಂತಿಮ ಮಾಡಲಾಗಿದೆ. ಐದು ಸರಣಿ ಸಭೆಗಳ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕದ ಟ್ಯಾಬ್ಲೋ ಈಗಾಗಲೇ ಅಂಗೀಕಾರವಾಗಿದೆ.

Stay up to date on all the latest ರಾಷ್ಟ್ರೀಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp