ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ ಹೃದಯಾಘಾತವಾಗುವ ಸಾಧ್ಯತೆ; ವೈದ್ಯರ ಕಳವಳ

ಹಳೆ ದೆಹಲಿ ದರಿಯಾಗಂಜ್ ನಲ್ಲಿ ಕಳೆದ ಡಿಸೆಂಬರ್ 20 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಅವರ  ಖಾಸಗಿ  ವೈದ್ಯ ಡಾ.ಹರ್ಜಿತ್ ಸಿಂಗ್ ಭಟ್ಟಿ  ಕಳವಳವ್ಯಕ್ತಪಡಿಸಿದ್ದಾರೆ.
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ ಹೃದಯಾಘಾತವಾಗುವ ಸಾಧ್ಯತೆ; ವೈದ್ಯರ ಕಳವಳ
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ ಹೃದಯಾಘಾತವಾಗುವ ಸಾಧ್ಯತೆ; ವೈದ್ಯರ ಕಳವಳ

ನವದೆಹಲಿ: ಹಳೆ ದೆಹಲಿ ದರಿಯಾಗಂಜ್ ನಲ್ಲಿ ಕಳೆದ ಡಿಸೆಂಬರ್ 20 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಅವರ  ಖಾಸಗಿ  ವೈದ್ಯ ಡಾ.ಹರ್ಜಿತ್ ಸಿಂಗ್ ಭಟ್ಟಿ  ಕಳವಳವ್ಯಕ್ತಪಡಿಸಿದ್ದಾರೆ.
 
ಚಿಕಿತ್ಸೆಗಾಗಿ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ-ಏಮ್ಸ್ ಗೆ ದಾಖಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. ಈ ಸಂಬಂಧ ಡಾ.ಹರ್ಜಿತ್ ಸಿಂಗ್ ಸರಣಿ ಟ್ವೀಟ್ ಮಾಡಿದ್ದಾರೆ. 

ಅಪರೂಪದ ರೋಗದಿಂದ ಬಳಲುತ್ತಿರುವ ಚಂದ್ರಶೇಖರ್ ಆಜಾದ್ ಅವರು ಪ್ರತಿ ಎರಡು ವಾರಗಳಿಗೊಮ್ಮೆ ’ಫ್ಲೆಬೋಟಮಿ’(ದೇಹದಿಂದ ರಕ್ತ ತೆಗೆಯುವುದು) ಚಿಕಿತ್ಸೆಗೆ ಒಳಗಾಗಬೇಕಿತ್ತು. ಈ ಸಂಬಂಧ ಅವರು ಕಳೆದ ಒಂದು ವರ್ಷದಿಂದ ಏಮ್ಸ್ ನ ಹೆಮಟಾಲಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾ ಹರ್ಜಿತ್ ಸಿಂಗ್ ಭಟ್ಟಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com