ಜಮ್ಮು ಕಾಶ್ಮೀರ: ಗಂಡರ್‌ಬಲ್ ಎನ್‌ಕೌಂಟರ್‌ನಲ್ಲಿ ತಪ್ಪಿಸಿಕೊಂಡ ಲಷ್ಕರ್ ಉಗ್ರನ ಬಂಧನ

ಲಷ್ಕರ್-ಎ-ತೊಯ್ಬಾ(ಎಲ್‌ಇಟಿ)  ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. 
ಫೈಲ್ ಚಿತ್ರ
ಫೈಲ್ ಚಿತ್ರ

ಶ್ರೀನಗರ: ಲಷ್ಕರ್-ಎ-ತೊಯ್ಬಾ(ಎಲ್‌ಇಟಿ)  ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. 

ನಿಸಾರ್ ದಾರ್ ಎಂದು ಗುರುತಿಸಲ್ಪಟ್ಟ ಭಯೋತ್ಪಾದಕ ಈ ಹಿಂದೆ ಗಂಡರ್‌ಬಲ್ ಜಿಲ್ಲೆಯ ಕುಲ್ಲನ್ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಿಂದ ತಪ್ಪಿಸಿಕೊಂಡಿದ್ದು, ಇದರಲ್ಲಿ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಹತ್ಯೆಯಾಗಿದ್ದನೆಂದು  ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿ ಇಮ್ತಿಯಾಜ್ ಹುಸೇನ್ ಹೇಳಿದ್ದಾರೆ.

"ಲಷ್ಕರ್-ಎ-ತೋಯ್ಬಾ ಭಯೋತ್ಪಾದಕ ನಿಸಾರ್ ದಾರ್ ನನ್ನು ಕಾಶ್ಮೀರ ಪೋಲೀಸರು ಮತ್ತು ಭದ್ರತಾ ಪಡೆಗಳು ಬಂಧಿಸಿವೆ. ಈತ ಕುಲ್ಲನ್ ಗಂಡರ್‌ಬಾಲ್‌ನಲ್ಲಿ ನಡೆದ ಎನ್‌ಕೌಂಟರ್‌ನಿಂದ ತಪ್ಪಿಸಿಕೊಂಡಿದ್ದ. ಇದರಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಒಬ್ಬ ಹತನಾಗಿದ್ದ. ಈಗ ಸೆರೆಯಾಗಿರುವ ಉಗ್ರ ಅನೇಕ ಉಗ್ರಕೃತ್ಯಗಳಲ್ಲಿ ತೊಡಗಿದ್ದಾನೆ ಎಂದು ಶಂಕಿಸಲಾಗಿದೆ." ಎಂದು ಹುಸೇನ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com