ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಎಲ್ಇಟಿ ಉಗ್ರನ ಬಂಧನ

ಕಾಶ್ಮೀರದಲ್ಲಿ ಹಲವು ಸರಣಿ ಭಯೋತ್ಪಾದಕ ದಾಳಿಗಳನ್ನು ನಡೆಸಿದ ಸಂಬಂಧ ಭದ್ರತಾ ಪಡೆಗಳಿಗೆ ಬೇಕಾಗಿದ್ದ ಲಷ್ಕರ್-ಇ-ತೊಯ್ಬಾ ಉಗ್ರಗಾಮಿಯೊಬ್ಬ ಕೊನೆಗೂ ಬಲೆಗೆ ಬಿದ್ದಿದ್ದಾನೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಉಗ್ರನನ್ನು ಪೊಲೀಸರು ಆಸ್ಪತ್ರೆಯಲ್ಲೇ ಬಂಧಿಸಿದ್ದಾನೆ. 

Published: 05th January 2020 11:23 AM  |   Last Updated: 05th January 2020 11:23 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ನವದೆಹಲಿ: ಕಾಶ್ಮೀರದಲ್ಲಿ ಹಲವು ಸರಣಿ ಭಯೋತ್ಪಾದಕ ದಾಳಿಗಳನ್ನು ನಡೆಸಿದ ಸಂಬಂಧ ಭದ್ರತಾ ಪಡೆಗಳಿಗೆ ಬೇಕಾಗಿದ್ದ ಲಷ್ಕರ್-ಇ-ತೊಯ್ಬಾ ಉಗ್ರಗಾಮಿಯೊಬ್ಬ ಕೊನೆಗೂ ಬಲೆಗೆ ಬಿದ್ದಿದ್ದಾನೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಉಗ್ರನನ್ನು ಪೊಲೀಸರು ಆಸ್ಪತ್ರೆಯಲ್ಲೇ ಬಂಧಿಸಿದ್ದಾನೆ. 

ಈ ವೇಳೆ ಆತನ ಸಹಚರರು ಪರಾರಿಯಾಗಿದ್ದಾರೆ. ಆತನಿಂದ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ನಿಸಾರ್ ಅಹಮದ್ ದಾರ್ ಎಂಬಾತ 2014ರಿಂದ ಉಗ್ರಗಾಮಿ ಸಂಘಟನೆಯಲ್ಲಿ ಸಕ್ರಿಯನಾಗಿದ್ದ. 

ಭದ್ರತಾಪಡೆಗಳು ಹಾಗೂ ನಾಗರೀಕರ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು.

ಚಿಕಿತ್ಸೆಗೆಂದು ಈಗ ಶ್ರೀನಗರದ ಶ್ರೀ ಮಹಾರಾಜ ಹರಿಸಿಂಗ್ ಆಸ್ಪತ್ರೆಗೆ ಬಂದಿದ್ದ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ದೊರೆಯಿತು. ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ವೇಳೆ ಆತನ ಸಹಚರರು ಪರಾರಿಯಾಗಿದ್ದು, ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ. 

Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp