ಮೇ.15ರಿಂದ ಬಿಹಾರ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಆರಂಭ: ಸುಶೀಲ್ ಕುಮಾರ್

ಮೇ.15 ರಿಂದ ಬಿಹಾರ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ ನವೀಕರಣ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಬಿಹಾರ ರಾಜ್ಯದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.
ಸುಶೀಲ್ ಕುಮಾರ್ ಮೋದಿ
ಸುಶೀಲ್ ಕುಮಾರ್ ಮೋದಿ

ಪಾಟ್ನ: ಮೇ.15 ರಿಂದ ಬಿಹಾರ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ ನವೀಕರಣ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಬಿಹಾರ ರಾಜ್ಯದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಖ್ಯಾ ನೋಂದಣಿ ಪ್ರಕ್ರಿಯೆಯನ್ನು ಈಗಾಗಲೇ ಪಶ್ಚಿಮ ಬಂಗಾಳ ಹಾಗೂ ಕೇರಳ ಸರ್ಕಾರ ಸ್ಥಗಿತಗೊಳಿಸಿದ್ದು, ಬಿಹಾರ ರಾಜ್ಯದಲ್ಲಿ ಈ ಪ್ರಕ್ರಿಯೆ ಪ್ರತೀ ವರ್ಷದಂತೆ ಮುಂದುವರೆಯಲಿದೆ. ಮೇ.15-18ರವರಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ, 

ಎನ್'ಪಿಆರ್ ಪ್ರಕ್ರಿಯೆಯನ್ನು ಮುಂದುವರೆಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. 2020ರ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ವರೆಗೂ ಇಡೀ ದೇಶದಾದ್ಯಂತ ಈ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ. 

2010ರಲ್ಲಿಯೇ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು. ಯುಪಿಎ ಆಡಳಿತಾವಧಿಯಲ್ಲಿ ಇದನ್ನು ಜಾರಿಗೆ ತರಲಾಗಿತ್ತು. ಎನ್ಆರ್'ಸಿ ಹಾಗೂ ಎನ್'ಪಿಆರ್'ಗೆ ಸಾಕಷ್ಟು ವ್ಯತ್ಯಾಸಗಳಿವೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com