ಸರ್ಕಾರ ಮಾಡಿರುವ ಕೆಲಸಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ: ದೆಹಲಿ ಸಿಎಂ ಕೇಜ್ರಿವಾಲ್

ನಮ್ಮ ಆಮ್ ಆದ್ಮಿ ಪಕ್ಷದ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಮಾಡಿರುವ ಕೆಲಸಗಳನ್ನು ಮುಂದಿಟ್ಟುಕೊಂಡು ಹಾಲಿ ಚುನಾವಣೆಯನ್ನು ಎದುರಿಸುತ್ತೇವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ನಮ್ಮ ಆಮ್ ಆದ್ಮಿ ಪಕ್ಷದ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಮಾಡಿರುವ ಕೆಲಸಗಳನ್ನು ಮುಂದಿಟ್ಟುಕೊಂಡು ಹಾಲಿ ಚುನಾವಣೆಯನ್ನು ಎದುರಿಸುತ್ತೇವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅತ್ತ ಕೇಂದ್ರ ಚುನಾವಣಾ ಮುಖ್ಯಾಧಿಕಾರಿ ಸುನೀಲ್ ಆರೋರಾ ಅವರು, ದೆಹಲಿ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಳಿಸಿದ್ದು, ಫೆಬ್ರವರಿ 8 ರಂದು ಒಂದೇ ಹಂತದಲ್ಲಿ ದೆಹಲಿಯಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 11ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಸುನೀಲ್ ಆರೋರಾ  ಹೇಳಿದ್ದಾರೆ.

ಅವರ ಸುದ್ದಿಗೋಷ್ಠಿ ಬೆನ್ನಲ್ಲೇ ಇತ್ತ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, ಕಳೆದ ಐದು ವರ್ಷಗಳಲ್ಲಿ ಆಪ್ ಸರ್ಕಾರ ಮಾಡಿರುವ ಕೆಲಸಗಳು ಮತ್ತು ಜಾರಿಗೆ ತಂದಿರುವ ಯೋಜನೆಗಳು ಜನರ ಮುಂದಿದೆ. ಅವುಗಳನ್ನೇ ಮುಂದಿಟ್ಟು ಕೊಂಡು ನಾವು ಈ ಬಾರಿ ಚುನಾವಣೆ ಎದುರಿಸುತ್ತೇವೆ. ಈ ಬಾರಿ ಕೂಡ ಆಪ್ ಗೆ ಜನ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯ ವಿಧಾನಸಭೆ 70 ಸದಸ್ಯರ ಬಲ ಹೊಂದಿದ್ದು,  2015ರಲ್ಲಿ ನಡೆದ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬರೋಬ್ಬರಿ 67 ಸ್ಥಾನಗಳನ್ನು ಗೆದ್ದು ಬಹುತೇಕ ಕ್ಲೀನ್ ಸ್ವೀಪ್ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com