ದೆಹಲಿ ಮತದಾರನ ಮೂಡ್: ಸಿಎಂ ಸ್ಥಾನಕ್ಕೆ ಕೇಜ್ರಿವಾಲ್, ಪ್ರಧಾನಿ ಸ್ಥಾನಕ್ಕೆ ಮೋದಿ
ದೆಹಲಿ ವಿಧಾನಸಭೆ ಚುನಾವಣೆಗೆ ಸೋಮವಾರ ದಿನಾಂಕ ಪ್ರಕಟವಾಗಿದ್ದು, ಫೆಬ್ರವರಿ 8ರಂದು ಮತದಾನ ನಡೆಯಲಿದೆ ಮತ್ತು ಫೆಬ್ರವರಿ 11ರಂದು ಫಲಿತಾಂಶ ಪ್ರಕಟವಾಗಲಿದೆ.
Published: 06th January 2020 11:58 PM | Last Updated: 06th January 2020 11:58 PM | A+A A-

ಅರವಿಂದ್ ಕೇಜ್ರಿವಾಲ್
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಸೋಮವಾರ ದಿನಾಂಕ ಪ್ರಕಟವಾಗಿದ್ದು, ಫೆಬ್ರವರಿ 8ರಂದು ಮತದಾನ ನಡೆಯಲಿದೆ ಮತ್ತು ಫೆಬ್ರವರಿ 11ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಮಧ್ಯೆ, ಚುನಾವಣೆ ದಿನಾಂಕ ಪ್ರಕಟವಾಗುವ ಎರಡು ದಿನಗಳ ಮುನ್ನ ಅಂದರೆ ಜನವರಿ 4ರಂದು ಐಎಎನ್ ಎಸ್ - ಸಿ ವೋಟರ್ ನಡೆಸಿದ ಸಮೀಕ್ಷೆ ಇಂದು ಬಹಿರಂಗವಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರೇ ದೆಹಲಿ ಮುಖ್ಯಮಂತ್ರಿಯಾಗಿ ಹಾಗೂ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮುಂದುವರೆಯಬೇಕು ಎಂದು ರಾಷ್ಟ್ರ ರಾಜಧಾನಿ ಮತದಾರರು ಹೇಳಿದ್ದಾರೆ.
ಈ ಬಾರಿ ದೆಹಲಿಯ ಮುಖ್ಯಮಂತ್ರಿಯಾರಬೇಕು ಎಂಬ ಪ್ರಶ್ನೆಗೆ ಒಂಬತ್ತು ಆಯ್ಕೆಗಳನ್ನು ನೀಡಲಾಗಿತ್ತು. ಅರವಿಂದ್ ಕೇಜ್ರಿವಾಲ್ ಅವರೇ ಮತ್ತೆ ಸಿಎಂ ಆಗಬೇಕು ಎಂದು ಶೇ.69.5ರಷ್ಟು ಮತದಾರರು ಹೇಳಿದ್ದಾರೆ.
ಎರಡನೇ ಸ್ಥಾನದಲ್ಲಿರುವ ಬಿಜೆಪಿಯ ಹರ್ಷ ವರ್ಧನ್ ಅವರು ಶೇ.10.7ರಷ್ಟು ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ನ ಅಜಯ್ ಮಾಕೇನ್ ಅವರು ಶೇ.7.1ರಷ್ಟು ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಬಿಜೆಪಿಯ ಮತ್ತೊಬ್ಬ ಮುಖ್ಯಮಂತ್ರಿ ಅಭ್ಯರ್ಥಿ, ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಅವರು ಕೇವಲ ಶೇ.1ರಷ್ಟು ಮತಗಳು ಮಾತ್ರ ಪಡೆದಿದ್ದಾರೆ.
ಇನ್ನು ಪ್ರಧಾನಿ ಹುದ್ದೆಗೆ ಯಾರೂ ಉತ್ತಮ ಅಭ್ಯರ್ಥಿ ಎಂಬ ಪ್ರಶ್ನೆಗೆ, ಶೇ.62.4 ರಷ್ಟು ಮತದಾರರು ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಮುಂದುವರೆಯಲಿ ಎಂದಿದ್ದಾರೆ. ಕಾಂಗ್ರೆಸ್ ನ ರಾಹುಲ್ ಗಾಂಧಿ ಅವರು ಶೇ.8.1 ರಷ್ಟು ಮತಗಳನ್ನು ಪಡೆದಿದ್ದಾರೆ.