ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ನ್ಯಾಯಮೂರ್ತಿಗಳ ಪೀಠ ರಚನೆ, ಜ.13ರಿಂದ ಮರು ಪರಿಶೀಲನಾ ಅರ್ಜಿ ವಿಚಾರಣೆ!

ಶಬರಿಮಲೆಗೆ ಎಲ್ಲಾ ವಯೋಮಿತಿ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿನ ಮರುಪರಿಶೀಲನೆ ಅರ್ಜಿ ವಿಚಾರಣೆ ಜನವರಿ 13ರಿಂದ ವಿಚಾರಣೆ ಆರಂಭಗೊಳ್ಳಲಿದೆ.
ಶಬರಿಮಲೆ
ಶಬರಿಮಲೆ

ನವದೆಹಲಿ: ಶಬರಿಮಲೆಗೆ ಎಲ್ಲಾ ವಯೋಮಿತಿ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿನ ಮರುಪರಿಶೀಲನೆ ಅರ್ಜಿ ವಿಚಾರಣೆ ಜನವರಿ 13ರಿಂದ ವಿಚಾರಣೆ ಆರಂಭಗೊಳ್ಳಲಿದೆ. 

2018ರಲ್ಲಿ ಅಂದಿನ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪಂಚ ಪೀಠ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ಇದಾದ ಬಳಿಕ ತೀರ್ಪಿನ ಕುರಿತಂತೆ ಮರುಪರಿಶೀಲನಾ ಅರ್ಜಿಗಳು ದಾಖಲಾಗಿದ್ದವು. 

ಪೂಜಾ ಸ್ಥಳಗಳಿಗೆ ಮಹಿಳೆಯರ ಪ್ರವೇಶ ಕೇವಲ ಹಿಂದೂಗಳ ದೇವಾಲಯಕ್ಕಷ್ಟೇ ಸೀಮಿತವಾಗಿಲ್ಲ. ಇದು ಎಲ್ಲಾ ಮಸೀದಿಗಳಿಗೆ ಮಹಿಳೆಯರ ಪ್ರವೇಶಕ್ಕೂ ಅನ್ವಯಿಸುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಜ.13ರಂದು ಈ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ 9 ನ್ಯಾಯಮೂರ್ತಿಗಳನ್ನೊಗೊಂಡ ಪೀಠವು ವಿಚಾರಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com