ಜೆಎನ್ ಯು ಕ್ಯಾಂಪಸ್ ದೇಶ ವಿರೋಧಿ ಚಟುವಟಿಕೆಗಳ ಕೇಂದ್ರ: ಹಿಂದೂ ರಕ್ಷಾ ದಳ
ನವದೆಹಲಿ: ಕಳೆದ ಭಾನುವಾರ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ಹೊಣೆಯನ್ನು ಹಿಂದೂ ರಕ್ಷಾ ದಳ ಹೊತ್ತುಕೊಂಡ ನಂತರ ಈ ಬಗ್ಗೆ ತನಿಖೆ ನಡೆಸುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.
ಹಿಂದೂ ವಿರೋಧಿ ಮತ್ತು ದೇಶ ವಿರೋಧಿ ಚಟುವಟಿಕೆ ವಿಶ್ವವಿದ್ಯಾಲಯದೊಳಗೆ ನಡೆಯುತ್ತಿದೆ ಎಂದು ಸ್ವಘೋಷಿತ ಹಿಂದೂ ರಕ್ಷಾ ದಳದ ಕಾರ್ಯಕರ್ತರು ವಿಶ್ವವಿದ್ಯಾಲಯದೊಳಗೆ ನುಗ್ಗಿ ದಾಳಿ ನಡೆಸಿದರು ಎಂದು ದಳದ ಮುಖ್ಯಸ್ಥ ಭೂಪೇಂದ್ರ ತೊಮರ್ ಅಲಿಯಾಸ್ ಪಿಂಕಿ ಚೌಧರಿ ಹೇಳಿದ್ದು ಈ ಸಂಬಂಧ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ.
ಜೆಎನ್ ಯು ಕಮ್ಯೂನಿಸ್ಟರ ಕೇಂದ್ರವಾಗಿದ್ದು ಇಂತವುಗಳನ್ನು ನಾವು ಪ್ರೋತ್ಸಾಹಿಸುವುದಿಲ್ಲ. ನಮ್ಮ ದೇಶ, ನಮ್ಮ ಧರ್ಮವನ್ನು ನಿಂದಿಸುತ್ತಾರೆ. ಧರ್ಮದ ಬಗ್ಗೆ ಅವರ ವರ್ತನೆ ದೇಶ ವಿರೋಧಿಯಾಗಿದೆ. ಬೇರೆ ವಿಶ್ವವಿದ್ಯಾಲಯಗಳಲ್ಲಿ ಸಹ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಲು ಪ್ರಯತ್ನಿಸಿದರೆ ಮುಂದಿನ ದಿನಗಳಲ್ಲಿ ಸಹ ಇಂತಹದ್ದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತೊಮರ್ ವಿಡಿಯೊದಲ್ಲಿ ಹೇಳಿದ್ದಾರೆ.
ವಿಡಿಯೊ ಟ್ವಿಟ್ಟರ್ ನಲ್ಲಿ ವೈರಲ್ ಆಗುತ್ತಿದ್ದಂತೆ ದೆಹಲಿ ಪೊಲೀಸರು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ