ಬಂಧಿತ ಭೀಮ್ ಆರ್ಮಿ ಮುಖ್ಯಸ್ಥನಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗೆ ಕೋರ್ಟ್ ಆದೇಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ದರ್ಯಾಗಂಜ್ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ....
ಚಂದ್ರಶೇಖರ್ ಆಜಾದ್
ಚಂದ್ರಶೇಖರ್ ಆಜಾದ್

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ದರ್ಯಾಗಂಜ್ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ದೆಹಲಿ ಕೋರ್ಟ್ ಮಂಗಳವಾರ ತಿಹಾರ್ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

ಏಮ್ಸ್ ನಲ್ಲಿ ವೈದ್ಯಕೀಯ ಚಿಕಿತ್ಸೆ ಕೋರಿ ಭೀಮ್ ಆರ್ಮಿ ಮುಖ್ಯಸ್ಥ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚೀಫ್ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಅರುಲ್ ವರ್ಮಾ ಅವರು, ಚಂದ್ರಶೇಖರ್ ಆಜಾದೆಗೆ ತುರ್ತು ಚಿಕಿತ್ಸೆ ಕೊಡಿಸುವಂತೆ ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.

ಇದೇ ವೇಳೆ ಆಜಾದ್ ಆರೋಗ್ಯದ ಕುರಿತು ವೈದ್ಯಕೀಯ ವರದಿ ಸಲ್ಲಿಸಲು ಕಾಲಾವಕಾಶ ನೀಡಿ ಎಂದು ತಿಹಾರ್ ಜೈಲ್ ಅಧಿಕಾರಿಗಳು ಕೋರ್ಟ್ ಗೆ ಮನವಿ ಮಾಡಿದರು.

ಚಂದ್ರಶೇಖರ್ ಆಜಾದ್ ಅವರು ಪಾಲಿಸಿಥೀಮಿಯಾ ಎಂಬ ಅಪರೂಪದ ಕಾಯಿಲೆಯಿಂದ ಬಳುತ್ತಿದ್ದು, ಅವರು ಪ್ರತಿ ಎರಡು ವಾರಗಳಿಗೊಮ್ಮೆ ’ಫ್ಲೆಬೋಟಮಿ’(ದೇಹದಿಂದ ರಕ್ತ ತೆಗೆಯುವುದು) ಚಿಕಿತ್ಸೆಗೆ ಒಳಗಾಗಬೇಕಿತ್ತು. ಈ ಸಂಬಂಧ ಅವರು ಕಳೆದ ಒಂದು ವರ್ಷದಿಂದ ಏಮ್ಸ್ ನ ಹೆಮಟಾಲಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com