ಜಗದೀಶ್ ಕುಮಾರ್
ಜಗದೀಶ್ ಕುಮಾರ್

ತಾತ್ಕಾಲಿಕವಾಗಿ ಕ್ಯಾಂಪಸ್ ಬಂದ್ ಮಾಡುವ ಯೋಚನೆ ಇಲ್ಲ: ಜೆಎನ್ ಯು ಕುಲಪತಿ

ದೆಹಲಿಯ ಪ್ರತಿಷ್ಠಿತ ಜವಾಹರ್​ ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ಭಾನುವಾರ ನಡೆದ ಗೂಂಡಾ ದಾಳಿ ಹಿನ್ನೆಲೆಯಲ್ಲಿ ಕ್ಯಾಂಪಸ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡುವ ಯಾವುದೇ ಯೋಚನೆ....

ನವದೆಹಲಿ: ದೆಹಲಿಯ ಪ್ರತಿಷ್ಠಿತ ಜವಾಹರ್​ ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ಭಾನುವಾರ ನಡೆದ ಗೂಂಡಾ ದಾಳಿ ಹಿನ್ನೆಲೆಯಲ್ಲಿ ಕ್ಯಾಂಪಸ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡುವ ಯಾವುದೇ ಯೋಚನೆ ಇಲ್ಲ ಎಂದು ಜೆಎನ್ ಯು ಕುಲಪತಿ ಎಂ ಜಗದೀಶ್ ಕುಮಾರ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಕ್ಯಾಂಪಸ್ ನಲ್ಲಿ ಭಾರಿ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಜಗದೀಶ್ ಕುಮಾರ್ ಅವರು ಇಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಲಪತಿಗಳು, ವಿವಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡುವ ಬಗ್ಗೆ ಸಚಿವಾಲಯ ಯಾವುದೇ ಸಲಹೆ ನೀಡಿಲ್ಲ. ಕ್ಯಾಂಪಸ್ ಅನ್ನು ಸಹಜ ಸ್ಥಿತಿಗೆ ತರುವ ಯತ್ನ ನಡೆಸುತ್ತಿದ್ದೇವೆ ಎಂದರು.

ಇನ್ನು ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳು ಸಹ, ಕ್ಯಾಂಪಸ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡುವ ಯಾವುದೇ ಪ್ರಸ್ತಾಪ ತಮ್ಮ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಆದರೆ ಕ್ಯಾಂಪಸ್ ಅನ್ನು ಸಹಜ ಸ್ಥಿತಿಗೆ ತರುವಂತೆ ಅಧಿಕಾರಿಗಳು ಕುಲಪತಿ ಜಗದೀಶ್ ಕುಮಾರ್ ಅವರಿಗೆ ಸೂಚಿಸಿದ್ದಾರೆ.

ಹಿಂಸಾಚಾರದ ನಂತರ ವಿವಿಯ ಕ್ಯಾಂಪಸ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ವರದಿ ಮಾಡಲಾಗಿತ್ತು. ಆದರೆ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಕುಲಪತಿಗಳು, ಬಂದ್ ಮಾಡುವ ಕುರಿತು ಯಾವುದೇ ಸೂಚನೆ ಅಥವಾ ಸಲಹೆ ಬಂದಿಲ್ಲ ಎಂದು ಹೇಳಿದ್ದಾರೆ.

ಕಳೆದ ಭಾನುವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ತೆಗೆದುಕೊಳ್ಳದ ಕುಲಪತಿ ವಿರುದ್ಧ ವಿವಿಯ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com