ತಮಿಳುನಾಡು ಡಿಸಿಎಂ ಪನ್ನೀರ್ ಸೇಲ್ವಂ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ವಿಐಪಿ ಭದ್ರತೆ ಹಿಂಪಡೆದ ಕೇಂದ್ರ

ತಮಿಳುನಾಡು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೇಲ್ವಂ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರಿಗೆ ನೀಡಲಾಗಿದ್ದ ವಿಐಪಿ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಟಾಲಿನ್ - ಪನ್ನೀರ್ ಸೇಲ್ವಂ
ಸ್ಟಾಲಿನ್ - ಪನ್ನೀರ್ ಸೇಲ್ವಂ

ನವದೆಹಲಿ: ತಮಿಳುನಾಡು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೇಲ್ವಂ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರಿಗೆ ನೀಡಲಾಗಿದ್ದ ವಿಐಪಿ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಪನ್ನೀರ್ ಸೇಲ್ವಂ ಅವರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಯಿಂದ ವೈ ಪ್ಲಸ್ ಭದ್ರತೆ ಹಾಗೂ ಸ್ಟಾಲಿನ್ ಅವರಿಗೆ ಝೆಡ್ ಪ್ಲಸ್ ಭದ್ರತೆ ನೀಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರ ಹಾಗೂ ನಕ್ಸಲ್ ಪೀಡಿತ ಪ್ರದೇಶದ ನಾಯಕರಿಗೆ ಈ ವಿಐಪಿ ಭದ್ರತೆ ನೀಡಲಾಗುತ್ತದೆ. ಇದೀಗ ಕೇಂದ್ರ ಸರ್ಕಾರ ಈ ಇಬ್ಬರು ನಾಯಕರ ವಿಐಪಿ ಭದ್ರತೆಯನ್ನು ಹಿಂಪಡೆದಿದೆ.

ಗಣ್ಯರ ಬೆದರಿಕೆ ಮೌಲ್ಯಮಾಪನ ಪರಿಶೀಲನಾ ವರದಿ ಆಧರಿಸಿ ತಮಿಳುನಾಡಿನ ಈ ಇಬ್ಬರು ರಾಜಕಾರಣಿಗಳ ವಿಐಪಿ ಭದ್ರತೆ ಹಿಂಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಕ್ಕೆ ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದ್ದ ಎಸ್ ಪಿಜಿ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com