'ಮೊದಲು ಹಿಂಸಾಚಾರ ನಿಲ್ಲಲಿ, ನಂತರ ಸಿಎಎ ಬಗ್ಗೆ ವಿಚಾರಣೆ': ಸುಪ್ರೀಂ ಕೋರ್ಟ್ 

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಸಾಂವಿಧಾನಿಕ ಎಂದು ಘೋಷಿಸಿ ಅದನ್ನು ಎಲ್ಲಾ ರಾಜ್ಯಗಳು ಜಾರಿಗೆ ತರುವಂತೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. 
ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ
ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಸಾಂವಿಧಾನಿಕ ಎಂದು ಘೋಷಿಸಿ ಅದನ್ನು ಎಲ್ಲಾ ರಾಜ್ಯಗಳು ಜಾರಿಗೆ ತರುವಂತೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.


ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಸಲ್ಲಿಕೆಯಾಗಿದ್ದ ಅರ್ಜಿ ಬಗ್ಗೆ ಅಚ್ಚರಿ ವ್ಯಕ್ತಪಡಿಸಿ ಇದೇ ಮೊದಲ ಸಲ ಒಬ್ಬರು ಕಾಯ್ದೆಯನ್ನು ಸಾಂವಿಧಾನಿಕ ಎಂದು ಘೋಷಿಸಿ ಎಂದು ಕೇಳುತ್ತಿರುವುದು ಎಂದು ಹೇಳಿದೆ.


ಕಾನೂನಿನ ಸಿಂಧುತ್ವವನ್ನು ನಿರ್ಧರಿಸುವುದು ಈ ಕೋರ್ಟ್ ನ ಕೆಲಸವಾಗಿದೆಯೇ ಹೊರತು ಅದನ್ನು ಸಾಂವಿಧಾನಿಕ ಎಂದು ಘೋಷಿಸುವುದಲ್ಲ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವೈ ಮತ್ತು ಸೂರ್ಯ ಕಾಂತ್ ಅವರನ್ನು ಸಹ ಒಳಗೊಂಡ ನ್ಯಾಯಪೀಠ ಹೇಳಿದೆ.


ದೇಶದಲ್ಲಿ ಹಿಂಸಾಚಾರ ನಿಂತ ಮೇಲೆ ಪೌರತ್ವ ತಿದ್ದುಪಡಿ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ನಡೆಸಲಿದೆ ಎಂದು ಹೇಳಿದೆ.


ಸಿಎಎ ಸಾಂವಿಧಾನಿಕ ಎಂದು ಘೋಷಣೆ ಮಾಡಿ ಅದನ್ನು ಎಲ್ಲಾ ರಾಜ್ಯಗಳು ಜಾರಿಗೆ ತರಬೇಕೆಂದು ಆದೇಶ ನೀಡಬೇಕೆಂದು ಕೋರಿ ಅಡ್ವೊಕೇಟ್ ವಿನೀತ್ ದಂಡ ಎಂಬುವವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 


ಕಾಯ್ದೆ ಬಗ್ಗೆ ಸುಳ್ಳು ವದಂತಿ ಹಬ್ಬಿಸುವ ಕಾರ್ಯಕರ್ತರು, ವಿದ್ಯಾರ್ಥಿಗಳು, ಮಾಧ್ಯಮಗಳ ವಿರುದ್ಧ ಸಹ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com