ಕಾಶ್ಮೀರ ಎನ್ಕೌಂಟರ್: ಮತ್ತೋರ್ವ ಉಗ್ರ ಹತ, ಸೇನಾ ಕಾರ್ಯಾಚರಣೆ ಮುಂದುವರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ತ್ರಾಲ್ ನಲ್ಲಿ ನಡೆಯುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೋರ್ವ ಉಗ್ರನನ್ನು ಸೇನಾ ಪಡೆಗಳು ಹೊಡೆದುರುಳಿಸಿವೆ. ಆ ಮೂಲಕ ಮೃತ ಉಗ್ರರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ತ್ರಾಲ್ ನಲ್ಲಿ ನಡೆಯುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೋರ್ವ ಉಗ್ರನನ್ನು ಸೇನಾ ಪಡೆಗಳು ಹೊಡೆದುರುಳಿಸಿವೆ. ಆ ಮೂಲಕ ಮೃತ ಉಗ್ರರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ನಲ್ಲಿ ಉಗ್ರರು ಅಡಗಿ ಕುಳಿತಿರುವ ವಿಚಾರ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ್ದ ಸೇನೆ ಇಂದು ಬೆಳಗ್ಗೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಬಳಿಕ ಕಾರ್ಯಾಚರಣೆ ಮುಂದುವರೆಸಿದ್ದ ಸೇನೆ ಇದೀಗ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿದೆ. ಆ ಆ ಮೂಲಕ ಕಾರ್ಯಾಚರಣೆಯಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಸೋಪಿಯಾನ್ ಜಿಲ್ಲೆಯ ನರ್ಬಾಲ್ ಒಮ್ಪೊರಾ ಪ್ರದೇಶದಲ್ಲಿ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿರುವ ಸೇನಾಪಡೆ, ಶಸ್ತ್ರಾಸ್ತ್ರಗಳು ಹಾಗೂ ಕೆಲ ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com