ಪ್ರಧಾನಿ ವಿರುದ್ಧ ಪ್ರತಿಭಟನೆ: ಎಡ ಪಂಥೀಯ ವಿದ್ಯಾರ್ಥಿಗಳ ಬಂಧನ

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಬಂದರು ಬಳಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದ ಎಡ ಪಂಥೀಯ ಸಂಘಟನೆಯ ವಿದ್ಯಾರ್ಥಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

Published: 12th January 2020 02:44 PM  |   Last Updated: 12th January 2020 02:44 PM   |  A+A-


leftStudent1

ಎಡಪಂಥೀಯ ವಿದ್ಯಾರ್ಥಿಗಳು

Posted By : Nagaraja AB
Source : PTI

ಕೊಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಬಂದರು ಬಳಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದ ಎಡ ಪಂಥೀಯ ಸಂಘಟನೆಯ ವಿದ್ಯಾರ್ಥಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಕೊಲ್ಕತ್ತಾಕ್ಕೆ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದರು. ದೇಶಾದ್ಯಂತ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಾಸ್ ಪಡೆಯಬೇಕೆಂದು ಕಾಂಗ್ರೆಸ್ ಸೇರಿದಂತೆ ಇನ್ನಿತರ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ.

ಡಿಸೆಂಬರ್ 31, 2014ಕ್ಕೂ ಮುಂಚಿತವಾಗಿ ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶಗಳಿಂದ ವಲಸೆ ಬಂದಿರುವ ಹಿಂದೂಗಳು, ಸಿಖ್ ಗಳು, ಜೈನರು, ಪಾರ್ಸಿಗಳು, ಬೌದ್ದರು ಹಾಗೂ ಕ್ರಿಶ್ಚಿಯನ್ನರಿಗೆ ಪೌರತ್ವ ಒದಗಿಸುವುದು ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp