ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳದ ಮಮತಾ ಬ್ಯಾನರ್ಜಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗಿಯಾಗಿದ್ದ ಕೋಲ್ಕತಾ ಪೋರ್ಟ್ ಟ್ರಸ್ಟ್'ನ 150ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಗೈರು ಹಾಜರಾಗಿದ್ದಾರೆ. 

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗಿಯಾಗಿದ್ದ ಕೋಲ್ಕತಾ ಪೋರ್ಟ್ ಟ್ರಸ್ಟ್'ನ 150ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಗೈರು ಹಾಜರಾಗಿದ್ದಾರೆ. 

ಕೋಲ್ಕತಾ ಪೋರ್ಟ್ ಟ್ರಸ್ಟ್ 150ನೇ ವರ್ಷಾಚರಣೆಯನ್ನು ಆಚರಿಸುತ್ತಿದ್ದು, ಕಾರ್ಯಕ್ರಮ ಉದ್ಘಾಟಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಮತಾ ಬ್ಯಾನರ್ಜಿ ಹಾಗೂ ಪ್ರಧಾನಿ ಮೋದಿ ಕಾಣಿಸಿಕೊಳ್ಳಲಿದ್ದಾರೆಂದು ಹೇಳಲಾಗುತ್ತಿತ್ತು. ಆದರೆ, ಕಾರ್ಯಕ್ರಮಕ್ಕೆ ಮಮತಾ ಅವರು ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. 

ಕಾರ್ಯಕ್ರಮದ ಆಹ್ವಾನ ಪತ್ರಿಯಲ್ಲಿ ಪ್ರಧಾನಿ ಮೋದಿಯವರೊಂದಿಗೆ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧನಕರ್ ಹಾಗೂ ಕೇಂದ್ರ ಸಚಿವ ಮನ್ಸುಖ್ ಮಂಡವಿಯಾ ಅವರ ಹೆಸರನ್ನು ನಮೂದಿಸಲಾಗಿತ್ತು. 

Related Stories

No stories found.

Advertisement

X
Kannada Prabha
www.kannadaprabha.com