ಮರಾಡು ಅಕ್ರಮ ಕಟ್ಟಡ ಧ್ವಂಸ ಕಾರ್ಯಾಚರಣೆ ಪೂರ್ಣ, ಅಂತಿಮ ಕಟ್ಟಡ ಕೂಡ ನೆಲಸಮ

ಕೇರಳದ ಕೊಚ್ಚಿಯಲ್ಲಿನ ಮರಾಡು ಪ್ರದಶೇದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಇಂದೂ ಕೂಡ ಮತ್ತೆ ಎರಡು ಫ್ಲಾಟ್ ಗಳನ್ನು ಧ್ವಂಸಗೊಳಿಸಲಾಗಿದೆ.
ಕಟ್ಟಡ ನೆಲಸಮ ಕಾರ್ಯಾಚರಣೆ
ಕಟ್ಟಡ ನೆಲಸಮ ಕಾರ್ಯಾಚರಣೆ

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿನ ಮರಾಡು ಪ್ರದಶೇದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಇಂದೂ ಕೂಡ ಮತ್ತೆ ಎರಡು ಫ್ಲಾಟ್ ಗಳನ್ನು ಧ್ವಂಸಗೊಳಿಸಲಾಗಿದೆ.

ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಕೊಚ್ಚಿಯ ಮರಾಡು ಪ್ರದೇಶ ಬಳಿಯಿದ್ದ 4 ಲಕ್ಸುರಿ​ ವಸತಿ ಕಟ್ಟಡವನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್​ ನಾಲ್ಕು ತಿಂಗಳ ಹಿಂದೆಯೇ ಆದೇಶ ನೀಡಿತ್ತು. ಅದರಂತೆ ಶನಿವಾರ ಎರಡು ಕಟ್ಟಡಗಳನ್ನು ಧ್ವಂಸಗೊಳಿಸಿ, ತೆರುವುಗೊಳಿಸಿದ್ದ ಕೇರಳ ಸರ್ಕಾರ, ಇಂದು ಮತ್ತೆರಡು ಕಟ್ಟಡಗಳನ್ನು ಹೊಡೆದುರುಳಿಸಿದೆ. ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಎಚ್​2ಒ ಹೋಲಿ ಫೈತ್​​ ಅಪಾರ್ಟ್​ಮೆಂಟ್​ ಅನ್ನು ಉರುಳಿಸಿದ್ದ ಕೊಚ್ಚಿ ಜಿಲ್ಲಾಡಳಿತ ಇದೀಗ ಮತ್ತೊಂದು ಕಟ್ಟಡವನ್ನೂ ಕೂಡ ನೆಲಸಮ ಮಾಡಿದೆ. ನಿಯಂತ್ರಿತ ಸ್ಫೋಟಕಗಳನ್ನು ಬಳಸಿಕೊಂಡು ಗೋಲ್ಡನ್ ಕಯಲೋರಮ್ ಅಪಾರ್ಟ್ ಮೆಂಟ್ ಅನ್ನು ನೆಲಸಮ ಮಾಡಿತು. 

ಆ ಮೂಲಕ ಸುಪ್ರೀಂ ಕೋರ್ಟ್ ಆದೇಶದಂತೆ ಎಲ್ಲ ನಾಲ್ಕೂ ಅಕ್ರಮ ಕಟ್ಟಡಗಳನ್ನು ಕೇರಳ ಸರ್ಕಾರ ನೆಲಸಮ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಕಟ್ಟಡ ತೆರವಿಗೆ ಸುಪ್ರೀಂಕೊರ್ಟ್​ ಆದೇಶ ನೀಡಿತ್ತು. ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಮಾರಾಡುವಿನಲ್ಲಿರುವ ಕಟ್ಟಡಗಳನ್ನು ನೆಲಕ್ಕುರುಳಿಸಲು ಕೇರಳ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದಕ್ಕಾಗಿ ನ್ಯಾಯಾಲಯ 138 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದಲ್ಲದೆ, ಮನೆ ಕಳೆದುಕೊಂಡವರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com