ಸಿಎಎ, ಎನ್ಆರ್ಸಿ ಬಗ್ಗೆ 'ದೀದಿ' ದ್ವಿಮುಖ ನೀತಿ: ಮೋದಿ-ಮಮತಾ ಭೇಟಿಗೆ ಎಡಪಂಥಿಯರ ಪ್ರತಿಭಟನೆ!
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ವಿಷಯವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಎಡಪಂಥಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
Published: 12th January 2020 12:09 AM | Last Updated: 12th January 2020 12:11 AM | A+A A-

ಪ್ರಧಾನಿ ಮೋದಿ-ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ವಿಷಯವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಎಡಪಂಥಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಾಣಿ ರಶ್ಮೋನಿ ಅವೆನ್ಯೂನಲ್ಲಿ ಸಿಎಎ, ಎನ್ಆರ್ಸಿ ವಿರುದ್ಧ ಧರಣಿ ನಡೆಸುತ್ತಿರುವ ತೃಣಮೂಲ ಕಾಂಗ್ರೆಸ್ ಪರಿಷತ್ ವೇದಿಕೆ ಬಳಿಕ ಹಾಕಿದ್ದ ಬ್ಯಾರಿಕೇಡ್ ಗಳನ್ನು ವಿದ್ಯಾರ್ಥಿಗಳು ಕಿತ್ತು ಹಾಕಿ ಆಜಾದಿ ಮತ್ತು ಶೇಮ್ ಶೇಮ್ ಎಂದು ಘೋಷಣೆ ಕೂಗಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರ ವಿವರಣೆ ನೀಡುವಂತೆ ಆಗ್ರಹಿಸಿದರು.
ಮಮತಾ ಬ್ಯಾನರ್ಜಿ ಅವರು ಸಿಎಎ ಮತ್ತು ಎನ್ಆರ್ಸಿ ಹಿಂದೆ ಇದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ವೇದಿಕೆಗೆ ತೆರಳಿದ ಮಮತಾ ಬ್ಯಾನರ್ಜಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.